ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ 2024-25ನೇ ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಕ್ರೀಡಾಕೂಟಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಕ್ರೀಡಾಜ್ಯೋತಿಯನ್ನು ಬೆಳಗಿಸಿ, ಬಲೂನ್ ಹಾರಿಸುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈಯವರು ‘ಕ್ರೀಡಾಪಟುಗಳು ಮಾದಕ ದ್ರವ್ಯಕ್ಕೆ ಬಲಿಯಾಗುವುದಿಲ್ಲ, ಸಮಾಜದಲ್ಲಿ ಶಿಸ್ತನ್ನು ಅಳವಡಿಸುತ್ತಾರೆ. ಮಕ್ಕಳು ಫಿಟ್‌ನೆಸ್ ಬೆಳೆಸಿಕೊಳ್ಳಬೇಕು. ಒಂದೆರಡು ವರ್ಷಗಳಲ್ಲಿ ಪುತ್ತೂರಿನಲ್ಲಿ ಕ್ರೀಡೆಗೆ ಬೇಕಾದ ಸಿಂಥೆಟಿಕ್ ಗ್ರೌಂಡ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಿದ್ದೇವೆ‌. 60 ವರ್ಷದವರೂ ಕೂಡಾ ತಮ್ಮ ಫಿಟ್‌ನೆಸ್ ಗೆ ಗಮನಕೊಡಿ, ಪ್ರತಿಯೊಬ್ಬರೂ ದಿನದ ಒಂದು ಗಂಟೆ ತಮ್ಮ ದೈಹಿಕ ಸಾಮರ್ಥ್ಯ ಬೆಳೆಸಿಕೊಳ್ಳಲು ಸಮಯ ಮೀಸಲಿಡಿ’ ಎಂದು ಕರೆ ನೀಡಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಅರುಣ್ ಕುಮಾರ್ ಪುತ್ತಿಲ, ಪುತ್ತೂರು ನಗರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ ರೆಡ್ಡಿ, ಶಾಲಾ ಸಂಚಾಲಕ ಭಾಸ್ಕರ ಆಚಾರ್ ಹಿಂದಾರ್, ಆಡಳಿತ ಮಂಡಳಿ ಸದಸ್ಯರಾದ ಪ್ರಸನ್ನ ಭಟ್, ಕೃಷ್ಣಪ್ರಸಾದ್ ಕೆದಿಲಾಯ, ಹರೀಶ್ ಪುತ್ತೂರಾಯ, ಲಕ್ಷ್ಮಣ ಗೌಡ ಕರಂದ್ಲಾಜೆ, ಶಿಕ್ಷಣ ಸಮನ್ವಯಾಧಿಕಾರಿ ವಿಷ್ಣುಪ್ರಸಾದ್, ಕೃಷ್ಣಪ್ರಸಾದ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಗುರು ಜಯಮಾಲಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು‌.

LEAVE A REPLY

Please enter your comment!
Please enter your name here