ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆ

0

ಪುತ್ತೂರು: ಪುತ್ತೂರು ನಗರಸಭೆ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಅ.29ರಂದು ನಡೆಯಿತು.ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆಯಾದರು.


ಸೆ.17ರಂದು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಬಾಲಚಂದ್ರ ಅವರ ಪ್ರಥಮ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ ನಡೆಯಿತು.

ಈ ಆಯ್ಕೆ ಪ್ರಕ್ರಿಯೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರಾಗಿ ಬಾಲಪ್ಪಪೂಜಾರಿ ಯಾನೆ ಸುಂದರ ಪೂಜಾರಿ ಬಡಾವು, ಗೌರಿ ಬನ್ನೂರು, ಪ್ರೇಮ್ ಕುಮಾರ್, ಮೋಹಿನಿ, ಕೆ.ಸಂತೋಷ್ ಕುಮಾರ್, ದೀಕ್ಷಾ ಪೈ, ಮನೋಹರ್, ಪೂರ್ಣಿಮ, ರಮೇಶ್ ರೈ ನೆಲ್ಲಿಕಟ್ಟೆಯವರನ್ನು ಆಯ್ಕೆ ಮಾಡಲಾಗಿತ್ತು. ಬಳಿಕ ಸೆ.20ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ದಿನ ನಿಗದಿ ಮಾಡಲಾಗಿತ್ತು. ಆ ಸಂದರ್ಭ ವಿಧಾನಪರಿಷತ್ ಉಪಚುನಾವಣೆ ನೀತಿ ಸಂಹಿತೆಯಿಂದಾಗಿ ಆಯ್ಕೆ ಪ್ರಕ್ರಿಯೆ ಮುಂದೂಡಲಾಗಿತ್ತು. ಇದೀಗ ಅ.29ರಂದು ಸ್ಥಾಯಿ ಸಮಿತಿ ಆಯ್ಕೆ ಪ್ರಕ್ರಿಯೆ ನಡೆದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here