





ಕಾಣಿಯೂರು: ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಅ.29ರಂದು ಜರಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ವಹಿಸಿದ್ದರು. ಕಾರ್ಯಕ್ರಮಕ್ಕೆ ಮಾರ್ಗದರ್ಶನ ಅಧಿಕಾರಿಯಾದ ಕಾಣಿಯೂರು ಸರಕಾರಿ ಪ್ರೌಢ ಶಾಲಾ ಸಹ ಶಿಕ್ಷಕಿ ಪ್ರಮೋದಿನಿಯವರು ಶೈಕ್ಷಣಿಕ ಮಾಹಿತಿಯನ್ನು ನೀಡಿದರು.






ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಕುಸುಮಾವತಿ ಕಳ, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಪೋಷಕರು, ಭಾಗವಹಿಸಿದ್ದರು. ಮುಖ್ಯಗುರು ಪದ್ಮಯ ಗೌಡ ಸ್ವಾಗತಿಸಿ, ಶಿಕ್ಷಕ ಸುನಿಲ್ ವಂದಿಸಿದರು.






