ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

0

ಸವಣೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವವು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕನ್ನಡ ಧ್ವಜಾರೋಹಣ ಮಾಡುವುದರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಬಳಿಕ ಮಾತನಾಡಿದ ಅವರು ಕನ್ನಡ ಭಾಷೆಯ ಮಹತ್ವವನ್ನು ತಿಳಿಸಿ ಹೇಳಿ ಭಾಷಾಭಿಮಾನ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.

ವಿದ್ಯಾರ್ಥಿನಿಯರಾದ 10ನೇ ತರಗತಿಯ ಎಂ. ವೈಷ್ಣವಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅವನಿ ಆರ್. ರೈ ಕನ್ನಡದ ಕುರಿತು ಮಾತನಾಡಿದರು.

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ, ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಮತ್ತು ಎಲ್ಲಾ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 8ನೇ ತರಗತಿಯ ಸಜಾ ನಿರೂಪಿಸಿದ ಕಾರ್ಯಕ್ರಮದಲ್ಲಿ 10ನೇ ತರಗತಿಯ ವಿದಿಶಾ ಬಿ. ಕೆ. ಟ್ರೂಪ್ ಕಮಾಂಡಿಂಗ್ ನಡೆಸಿದರು. 

10ನೇ ತರಗತಿಯ ಎಂ. ವೈಷ್ಣವಿ ಮತ್ತು ಬಳಗದವರು ಪ್ರಾರ್ಥಿಸಿ 10ನೇ ತರಗತಿಯ ಪ್ರಾಪ್ತಿ ಪಿ. ಸಂವಿಧಾನ ಪೀಠಿಕೆ ವಾಚಿಸಿದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ರಿಷಿತಾ ಸ್ವಾಗತ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸನಾ ಫಾತಿಮಾ ವಂದನಾರ್ಪಣೆಗಳನ್ನು ನೆರವೇರಿಸಿದರು.

LEAVE A REPLY

Please enter your comment!
Please enter your name here