ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ: ಕನ್ನಡ ರಾಜ್ಯೋತ್ಸವ ಆಚರಣೆ

0

ಕಡಬ:ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿದರು . ಭಾಷೆ, ಸಂಸ್ಕೃತಿ ಹಾಗೂ ನಮ್ಮ ಭವ್ಯ ಪರಂಪರೆಗಳ ಕುರಿತು ವಿದ್ಯಾರ್ಥಿಗಳು ಅಭಿಮಾನ ಬೆಳೆಸಿಕೊಳ್ಳಬೇಕು; ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಹಿರಿಯರ ಆದರ್ಶಗಳು ಯುವ ಪೀಳಿಗೆಗೆ ಸ್ಪೂರ್ತಿಯಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸೇಂಟ್ ಅನ್ಸ್ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲ ಅಮಿತ್ ಪ್ರಕಾಶ್ ರೋಡ್ರಿಗಸ್, ನಾಡ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರುಗಳಾದ ಕಿರಣ್ ಕುಮಾರ್, ಸಿಸ್ಟರ್ ಹಿಲ್ಡಾ ರೋಡ್ರಿಗಸ್, ಶ್ರೀಲತಾ ಹಾಗೂ ದಕ್ಷಾಪ್ರಸಾದ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಫಾತಿಮತ್ ಝುಲ್ಪಾ ಹಾಗೂ ರಕ್ಷಾ ರಾಜ್ಯೋತ್ಸವದ ಮಹತ್ವ ಕುರಿತು ಭಾಷಣ ನೆರವೇರಿಸಿದರು. ವಿದ್ಯಾರ್ಥಿನಿ ಸಿಲ್ವಿಯ ಟಿ ಎಸ್ ಸ್ವಾಗತಿಸಿ, ಲಿಯೋನ ವಂದಿಸಿದರು. ಫಾತಿಮತ್ ನಾಝಿಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here