ಪುತ್ತೂರು : ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇದೇ ನವಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಆಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಶಾಲಾ ಪ್ರಾಂಶುಪಾಲರಾದ ಸಿಂಧು ವಿ.ಜಿ ನೇರವೇರಿಸಿ, ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಇದರ ಅಧ್ಯಕ್ಷರಾದ ಉಮೇಶ್ ನಾಯಕ್ ಇವರು ಕನ್ನಡದ ಹಿರಿಮೆಯ ಬಗ್ಗೆ ಮಾತನಾಡಿದರು. ತದನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 6ನೇ ತರಗತಿಯ ವಿಧಾತ್ರಿ ಸ್ವಾಗತಿಸಿ, 5ನೇ ತರಗತಿಯ ಲಾಸ್ಯ ವಂದಿಸಿದರು. 8ನೇ ತರಗತಿಯ ಸೃಷ್ಟಿ ಎಂ. ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.