ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸಾಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.
ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1ರ ಕಾರ್ಯಕ್ರಮಮಾಧಿಕಾರಿ ಕಿಶೋರ್ ಕುಮಾರ್ ರೈ ಪ್ರಮಾಣ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ,ಆಡಳಿತಾಧಿಕಾರಿಯಾದ ಅರ್ಪಿತ್ ಟಿ ಎ, ಕಾಲೇಜಿನ ಆಂತರಿಕ ಗುಣಮಟ್ಟದ ಭರವಸಾಕೋಶ ಸಂಯೋಜಕಿ ಕು. ಭವ್ಯಶ್ರೀ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ 2ರ ಕಾರ್ಯಕ್ರಮಾಧಿಕಾರಿ ಕು.ಮೇಘಶ್ರೀ,ಎನ್ಎಸ್ಎಸ್ ಘಟಕಗಳ ವಿದ್ಯಾರ್ಥಿ ನಾಯಕ, ನಾಯಕಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕ ಪ್ರಾಧ್ಯಾಪಕಿಯರು, ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆಯ ಸೇವಕರು ಸೇರಿದಂತೆ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕರಿಸಿದರು.
ಭ್ರಷ್ಟಾಚಾರದ ಕುರಿತು ಜನ ಜಾಗೃತಿ ಮೂಡಿಸುವ ವಿಜಿಲೆನ್ಸ್ ಸಪ್ತಾಹದ ಭಾಗವಾಗಿ ಭ್ರಷ್ಟಾಚಾರದ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಚರ್ಚಾಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.