ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ತಿಂಗಳ ಮಾಸಿಕ ಸಭೆಯ ಸಂದರ್ಭದಲ್ಲಿ ನೆಲ್ಯಾಡಿ ಸಿರಿ ಘಟಕದ ಒಳ ಆವರಣ ಹಾಗೂ ಹೊರ ಆವರಣ ಸ್ವಚ್ಛ ಮಾಡಲಾಯಿತು.
ಯೋಜನೆಯ ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಅವರು ಮಾರ್ಗದರ್ಶನ ನೀಡಿದರು. ಘಟಕ ಪ್ರತಿನಿಧಿ ರಮೇಶ್ ಬಾಣಜಾಲು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಘಟಕ ಸಂಯೋಜಕಿ ನಮಿತಾ ಎಸ್ ಶೆಟ್ಟಿ, ನೆಲ್ಯಾಡಿ ಒಕ್ಕೂಟದ ಸೇವಾಪ್ರತಿನಿಧಿ ಹೇಮಾವತಿ ಜೆ ಉಪಸ್ಥಿತರಿದ್ದರು. ಕುಸುಮ ಕೆ ವಂದಿಸಿದರು. ಶೌರ್ಯ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದ್ದರು.