ಪುತ್ತೂರು:ಏಳು ವರ್ಷಗಳ ಹಿಂದೆ ಬಜತ್ತೂರಿನಲ್ಲಿ ಸಂಭವಿಸಿದ್ದ ಅಪಘಾತವೊಂದರಲ್ಲಿ ವಾಹನವೊಂದರ ಚಾಲಕ ಮೃತಪಟ್ಟ ಘಟನೆಗೆ ಸಂಬಂಧಿಸಿ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಲಾರಿ ಚಾಲಕನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
2017ರ ಸೆ.9ರಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿತ್ತು.ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಲಾರಿ(ಟಿಎನ್ 18:ಎಎಚ್ 8852)ಬೇರೊಂದು ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ, ನೋಂದಣಿಯಾಗದ ಮಿನಿ ಟೆಂಪೋ ರೀತಿಯ ದೋಸ್ತ್ ಹೆಸರಿನ ವಾಹನಕ್ಕೆ ಡಿಕ್ಕಿ ಹೊಡೆದಿತ್ತು.ಪರಿಣಾಮ ದೋಸ್ತ್ ವಾಹನದ ಚಾಲಕ ನವಾಝ್(32ವ.)ಎಂಬವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ಕೆರದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದರು.
ಘಟನೆ ಕುರಿತು ಇಸ್ಮಾಯಿಲ್ ಕೋಲ್ಪೆ ಎಂಬವರು ನೀಡಿದ್ದ ದೂರಿನ ಮೇರೆಗೆ ಲಾರಿ ಚಾಲಕ ಹುಬ್ಬಳ್ಳಿಯ ಶಿವಪ್ಪಸುರೇಶ ಎಂಬಾತನ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಲಾರಿ ಚಾಲಕನನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡ್, ಮೋಹಿನಿ ವಾದಿಸಿದ್ದರು.