ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಉಪ್ಪಿನಂಗಡಿ ಹಾಗೂ ಉಪ್ಪಿನಂಗಡಿ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಉಪ್ಪಿನಂಗಡಿ ವಲಯದ ಪ್ರೌಢಶಾಲಾ ವಿಭಾಗದ ಹಾಗೂ ಉಪ್ಪಿನಂಗಡಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ‘ಪ್ರತಿಭೋತ್ಕರ್ಷ’ ನ.7 ರಂದು ಉಪ್ಪಿನಂಗಡಿ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಲಿದೆ.
ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ವಂ|ಜೆರಾಲ್ಡ್ ಡಿ’ಸೋಜರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಎ.ವಿ ಚಕ್ರಪಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಶಿಕ್ಷಣ ಸಂಯೋಜಕ ಹರಿಪ್ರಸಾದ್ ಎಂ, ಅತಿಥಿಗಳಾಗಿ ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದ ಪಾಲನಾ ಸಮಿತಿ ಉಪಾಧ್ಯಕ್ಷ ಮ್ಯಾಕ್ಸಿಂ ಲೋಬೊ, ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಶ್ರೀಧರ್ ಮಠಂದೂರುರವರು ಉಪಸ್ಥಿತಲಿರುವರು ಎಂದು ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಕಟಣೆ ತಿಳಿಸಿದೆ.
ಸನ್ಮಾನ..
ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಸಂತ ಫಿಲೋಮಿನಾ ಶಾಲೆಯ ಮುಖ್ಯಗುರು ಫಿಲೋಮಿನಾ ಪಾಯಿಸ್, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಹಿರೇಬಂಡಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಲಲಿತಾ, ಬೆಳ್ಳಿಪ್ಪಾಡಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಯಶೋಧ ಎನ್.ಎಂ, ಕೈಕಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ರಾಮಣ್ಣ ರೈರವರುಗಳನ್ನು ಗುರುತಿಸಿ ಸನ್ಮಾನಿಸಲಾಗುವುದು.