ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯ ಕ್ರೀಡಾಕೂಟ ಸಮಾಪನ

0

ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಮೊ|ಆಂಟನಿ ಪತ್ರಾವೋರವರ ಸ್ಮರಣಾರ್ಥ ನ.5 ಮತ್ತು 6ರಂದು ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆಯ ವಾರ್ಷಿಕ ಕ್ರೀಡಾಕೂಟ ಸಮಾಪನಗೊಂಡಿತು.


ನ.5ರಂದು ಬೆಳಿಗ್ಗೆ ಕ್ರೀಡಾಕೂಟ ಉದ್ಘಾಟನೆಗೊಂಡು ನ.6ರಂದು ಸಂಜೆಯವರೆಗೆ ನಡೆಯಿತು. ನ.6ರಂದು ಸಂಜೆ ಸಮಾರೋಪ ಸಮಾರಂಭ ನಡೆದ ಬಳಿಕ ಕ್ರೀಡಾಜ್ಯೋತಿಯನ್ನು ಸ್ತಂಭನಗೊಳಿಸಿ ಕ್ರೀಡಾಕೂಟಕ್ಕೆ ತೆರೆ ಎಳೆಯಲಾಯಿತು. ಬಳಿಕ ಕ್ರೀಡಾ ಧ್ವಜದ ಅವರೋಹಣ ನಡೆಸಿ ಮುಂದಿನ ಕ್ರೀಡಾಕೂಟದ ಸಾರಥ್ಯ ವಹಿಸಲಿರುವ ಸಂಸ್ಥೆಯ ಮುಖ್ಯಸ್ಥರಿಗೆ ಧ್ವಜ ಹಸ್ತಾಂತರಿಸಲಾಯಿತು. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಏಳು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.


ಸಮಾರೋಪ ಸಮಾರಂಭ:
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತೂರು ಉಪವಿಭಾಗದ ಡಿವೈಎಸ್‌ಪಿ ಅರುಣ್ ನಾಗೇ ಗೌಡ ಮಾತನಾಡಿ ಫಿಲೋಮಿನಾ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾಕೂಟಕ್ಕೆ ಒಳ್ಳೆಯ ಮಹತ್ವ ಕೊಡುತ್ತಿದ್ದಾರೆ. ನಾನು ಪ್ರತೀದಿನ ಈ ಕ್ರೀಡಾಂಗಣದಲ್ಲಿ ವಾಕ್ ಮಾಡುತ್ತಿರುತ್ತೇನೆ ಎಂದರು. ಮಕ್ಕಳಿಗೆ ಓದು ಮಾತ್ರ ಮುಖ್ಯ ಅಲ್ಲ. ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ಆರೋಗ್ಯ ಲಭಿಸುತ್ತದೆ. ವಿದ್ಯಾರ್ಥಿಗಳು ಕೂಡ ಕ್ರೀಡೆಗೆ ಮಹತ್ವ ಕೊಡಿ. ಇದರಿಂದ ನಿಮ್ಮ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ. ಭವಿಷ್ಯದಲ್ಲಿ ನಿಮಗೆ ಸಹಕಾರಿಯಾಗುತ್ತದೆ. ಸ್ಪೋರ್ಟ್ಸ್ ಕೋಟಾದಲ್ಲಿ ಕೂಡ ಉದ್ಯೋಗ ಲಭಿಸುವ ಸಾಧ್ಯತೆ ಇದೆ ಎಂದು ಹೇಳಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.


ಅಧ್ಯಕ್ಷತೆ ವಹಿಸಿದ್ದ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ|ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಎರಡು ದಿನಗಳ ಕ್ರೀಡೋತ್ಸವ ಅಚ್ಚುಕಟ್ಟಾಗಿ ಸುಂದರವಾಗಿ ನಡೆದಿದೆ. ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣ ಮೂಡಿತ್ತು. ನಮ್ಮ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ಸ್ಮರಣಾರ್ಥ ಕ್ರೀಡಾಕೂಟ ನಡೆಸಿ ಗೌರವಿಸುವುದರ ಜೊತೆಗೆ ನಾವೆಲ್ಲರೂ ಒಂದೇ ಎಂಬುದನ್ನು ತೋರಿಸಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಸಂಸ್ಥೆಯ ಮೇಲಿನ ಪ್ರೀತಿಯಿಂದ ಕೆಲಸ ಮಾಡಿದ್ದೀರಿ. ನಮ್ಮ ಜವಾಬ್ದಾರಿಯನ್ನು ನಿರ್ವಹಿಸುವುದು ನಮ್ಮ ಕರ್ತವ್ಯ ಎಂದು ಹೇಳಿ ಕ್ರೀಡಾಕೂಟದ ಯಶಸ್ಸಿಗೆ ಕಾರಣಕರ್ತರಾದ ಎಲ್ಲರಿಗೆ ಕೃತಜ್ಞತೆ ಸಲ್ಲಿಸಿದರು.


ಮಾಯ್ ದೆ ದೇವುಸ್ ಚರ್ಚ್‌ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟ, ಮಾಯ್ ದೆ ದೇವುಸ್ ಚರ್ಚ್‌ನ ಸಹಾಯಕ ಧರ್ಮಗುರು ಫಾ|ಲೋಹಿತ್ ಮಸ್ಕರೇನಸ್, ಪುತ್ತೂರು ಕ್ಲಸ್ಟರ್ ಸಿಆರ್‌ಪಿ ಶಶಿಕಲಾ, ಶಿಕ್ಷಣ ಸಂಯೋಜಕಿ ಅಮೃತಕಲಾ, ಸಂತ ಫಿಲೋಮಿನಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಆಂಟನಿ ಪ್ರಕಾಶ್ ಮೊಂತೆರೊ, ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಫಾ|ಅಶೋಕ್ ರಾಯನ್ ಕ್ರಾಸ್ತಾ, ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲಾ ಮುಖ್ಯಶಿಕ್ಷಕಿ ರೋಸ್‌ಲಿನ್ ಲೋಬೋ, ಸಂತ ವಿಕ್ಟರ್ ಆಂಗ್ಲಮಾಧ್ಯಮ ಶಾಲಾ ಮುಖ್ಯಗುರು ಹ್ಯಾರಿ ಡಿ’ಸೋಜ, ಮಾಯ್ ದೆ ದೇವುಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜಾನೆಟ್ ಡಿ’ಸೋಜ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಲೋರಾ ಪಾಸ್, ಸಂತ ಫಿಲೋಮಿನಾ ಬಾಲಕರ ಹಾಸ್ಟೆಲ್ ವಾರ್ಡನ್ ರೂಪೇಶ್ ತಾವ್ರೋ, ಸಂತ ಫಿಲೋಮಿನಾ ವಿದ್ಯಾರ್ಥಿನಿಯರ ಹಾಸ್ಟೆಲ್ ವಾರ್ಡನ್ ಲೂರ‍್ಡ್ ಮೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅತಿಥಿ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯಗುರು ಫಾ|ಮ್ಯಾಕ್ಸಿಮ್ ಡಿ’ಸೋಜ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಂತ ಫಿಲೋಮಿನಾ ಪ್ರೌಢಶಾಲೆಯ ಕಾರ್ಮಿನ್ ಪಾಸ್ ವಂದಿಸಿದರು. ಸಂತ ಫಿಲೋಮಿನಾ ಪ್ರೌಢಶಾಲೆಯ ಶಿಕ್ಷಕಿ ಸವಿತಾ ಮೊಂತೆರೊ ಕಾರ್ಯಕ್ರಮ ನಿರೂಪಿಸಿದರು. ಸಂತ ಫಿಲೋಮಿನಾ ಪದವಿ ಕಾಲೇಜಿನ ದೈಹಿಕ ನಿರ್ದೇಶಕ ಎಲಿಯಾಸ್ ಪಿಂಟೋ, ಪದವಿ ಪೂರ್ವ ಕಾಲೇಜಿನ ದೈಹಿಕ ನಿರ್ದೇಶಕ ರಾಜೇಶ್ ಮೂಲ್ಯ, ಸಂತ ಫಿಲೋಮಿನಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ನರೇಶ್ ಲೋಬೋ, ಐವಿ ಗ್ರೆಟ್ಟಾ ಪಾಸ್, ಮಾಯ್ ದೆ ದೇವುಸ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸದಾಶಿವ, ಪೂರ್ಣಿಮಾ, ಪದ್ಮನಾಭ, ಜಯರಾಜ್ ಜೈನ್ ಸಹಕರಿಸಿದರು.

7 ಶಿಕ್ಷಣ ಸಂಸ್ಥೆಗಳ 1500ಕ್ಕೂ ಮಿಕ್ಕಿದ ಕ್ರೀಡಾಪಟುಗಳು
2 ದಿನ ನಡೆದ ಕ್ರೀಡಾಕೂಟದಲ್ಲಿ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಏಳು ಶಿಕ್ಷಣ ಸಂಸ್ಥೆಗಳ ಸುಮಾರು 1500ಕ್ಕೂ ಮಿಕ್ಕಿದ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಕ್ರೀಡಾ ಧ್ವಜಾವರೋಹಣ, ಧ್ವಜ ಹಸ್ತಾಂತರ
ಸಮಾರೋಪ ಸಮಾರಂಭ ನಡೆದ ಬಳಿಕ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದ ಎದುರಿನ ಪ್ರಜ್ವಲನಾ ಪೀಠದಲ್ಲಿ ಬೆಳಗುತ್ತಿದ್ದ ಕ್ರೀಡಾಜ್ಯೋತಿಯನ್ನು ಸ್ತಂಭನಗೊಳಿಸಿ ಕ್ರೀಡಾಕೂಟಕ್ಕೆ ತೆರೆ ಎಳೆಯಲಾಯಿತು. ಬಳಿಕ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ|ಲಾರೆನ್ಸ್ ಮಸ್ಕರೇನಸ್‌ರವರು ಕ್ರೀಡಾ ಧ್ವಜದ ಅವರೋಹಣ ನಡೆಸಿ ಮುಂದಿನ ಕ್ರೀಡಾಕೂಟದ ಸಾರಥ್ಯ ವಹಿಸಲಿರುವ ಸಂತ ಫಿಲೋಮಿನಾ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಭ.ಲೋರಾ ಪಾಸ್‌ರವರಿಗೆ ಧ್ವಜ ಹಸ್ತಾಂತರಿಸಿದರು. ಈ ಮೂಲಕ ಈ ಬಾರಿಯ ಕ್ರೀಡಾಕೂಟದ ಸಂಭ್ರಮ ಸಮಾಪ್ತಿಗೊಂಡಿತು.

LEAVE A REPLY

Please enter your comment!
Please enter your name here