ಪುಣ್ಚಪ್ಪಾಡಿ ಶಾಲೆಯ ವಾರ್ಷಿಕ ಕ್ರೀಡಾಕೂಟ: ವಿದ್ಯಾರ್ಥಿಗಳು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಗಳು

0

ಸವಣೂರು : ಸ. ಹಿ. ಪ್ರಾ. ಶಾಲೆ ಪುಣ್ಚಪ್ಪಾಡಿಯ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 11 ರಂದು ನಡೆಸಲಾಯಿತು. ಸವಣೂರು ಗ್ರಾಮ ಪಂಚಾಯತ್ ನ ಸದಸ್ಯರಾದ ಗಿರಿಶಂಕರ ಸುಲಾಯ ಇವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸವಣೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಜಯಶ್ರೀ ಕುಚ್ಚೆಜಾಲು ಮತ್ತು ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಜರಿನಾರು ಇವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ವಿದ್ಯಾರ್ಥಿಗಳು ತಮ್ಮ ಕ್ರೀಡಾ ತಂಡಗಳ ಜೊತೆ ಪಥ ಸಂಚಲನವನ್ನು ನಡೆಸಿಕೊಟ್ಟರು.

  ಗಿರಿಶಂಕರ ಸುಲಾಯ ಇವರು ಮಾತನಾಡಿ ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರಾಶಸ್ತ್ಯವನ್ನು ನೀಡುತ್ತಿದ್ದು ದೇಹ ಸಧೃಡವಾಗಿ ಬೆಳೆಯಲು ವ್ಯಾಯಾಮ, ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು. ಜಯಶ್ರೀ ಕುಚ್ಚೆಜಾಲು ಕ್ರೀಡಾಕೂಟದ ಯಶಸ್ವಿಗೆ ಶುಭ ಹಾರೈಸಿದರು.

ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ಮಕ್ಕಳಿಗೆ ಅಭಿನಂದನೆಗಳನ್ನು ಸಲ್ಲಿಸಿ,ಪ್ರತಿಭೆ ಹೊರಹೊಮ್ಮಲು ಇದೊಂದು ಉತ್ತಮ ವೇದಿಕೆ.ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಜಾರಿನಾರು ತಿಳಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಧಾಕೃಷ್ಣ ದೇವಸ್ಯ ಇವರು ಅಧ್ಯಕ್ಷತೆ ವಹಿಸಿ ಸೋಲು ಗೆಲುವಿನ ಮೆಟ್ಟಿಲು. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಉತ್ತಮ ಪೈಪೋಟಿ ನೀಡುವಂತೆ ಶುಭ ಹಾರೈಸಿದರು. ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಪ್ರತ್ಯೇಕವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

  ಎಸ್. ಡಿ.ಎಂ.ಸಿ ಉಪಾಧ್ಯಕ್ಷರಾದ ಸರಿತ ತೋಟದಡ್ಕ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಭಾರ ಮುಖ್ಯಗುರು ಶೋಭಾ. ಕೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.ಅತಿಥಿ ಶಿಕ್ಷಕಿ ತೃಪ್ತಿ ವಂದಿಸಿದರು.  ಶಿಕ್ಷಕಿಯರಾದ ಚಂದ್ರಿಕಾ ಸವಿತಾ. ಬಿ ಹಾಗೂ ಸವಿತಾ ಓಡಂತರ್ಯ ಸಹಕರಿಸಿದರು.

LEAVE A REPLY

Please enter your comment!
Please enter your name here