ಕಸ್ತೂರಿ ರಂಗನ್ ವರದಿ ಕೈಬಿಡುವಂತೆ ಆಗ್ರಹಿಸಿ ನ.15ರಂದು ಗುಂಡ್ಯದಲ್ಲಿ ಬೃಹತ್ ಪ್ರತಿಭಟನೆ

0

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮೀರಾ ಸಾಹೇಬ್ ಕಡಬ ಮನವಿ

ಕಡಬ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಮಲೆನಾಡು ಜನ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಕಡಬ ಮನವಿ ಮಾಡಿದ್ದಾರೆ.

ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ,ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಪ್ಲಾಟಿಂಗ್ ಸಮಸ್ಯೆ ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು, ಈ ಎಲ್ಲಾ ಸಮಸ್ಯೆಗಳಿಂದ ರೈತರು ತೊಂದರೆಗೆ ಸಿಲುಕಿದ್ದಾರೆ. ಹಾಗಾಗಿ ಸಂಘ-ಸಂಸ್ಥೆಗಳು ಪಕ್ಷಾತೀತವಾಗಿ, ಧರ್ಮಾತೀತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here