ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ 17 ನೇಯ ವಾರ್ಷಿಕೋತ್ಸವ…

0

ಪುತ್ತೂರು: ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಲೋಕ ಕಲ್ಯಾಣಾರ್ಥವಾಗಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು 17ನೇ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ರಾಮನಾಮತಾರಕ ಹವನಪೂರ್ವಕ ಶ್ರೀ ಹನುಮಯಾಗ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ಕೆ ನ.15ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ವೇ.ಮೂ.ಚಂದ್ರಶೇಖರ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಚಾಲನೆ ದೊರೆಯಿತು.


ಬೆಳಿಗ್ಗೆ ಗಣಪತಿ ಹೋಮ, ಬಳಿಕ ಹನುಮಯಾಗದ ಸಂಕಲ್ಪ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಸಹಿತ ಶ್ರೀ ರಾಮನಾಮತಾರಕ ಮಂತ್ರ, ಶ್ರೀ ಹನುಮಾನ್ ಚಾಲೀಸಾ ಪಠಣ ವಿಜೃಂಭಣೆಯಿಂದ ಪ್ರಾರಂಭಗೊಂಡಿದೆ.


ಬೆಳಿಗ್ಗೆ ಗಂಟೆ 10.30ಕ್ಕೆ ಯಾಗದ ಪೂರ್ಣಾಹುತಿ ನಡೆಯಲಿದೆ. ಬೆಳಿಗ್ಗೆ ಗಂಟೆ 11.30ಕ್ಕೆ ಸಭಾ ಕಾರ್ಯಕ್ರಮ ಮತ್ತು ಸನ್ಮಾನವು ನಡೆಯಲಿದೆ. ಬಳಿಕ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಅನುಗ್ರಹ ಸಂದೇಶ ನೀಡಲಿದ್ದಾರೆ. ಸಾದ್ವಿ ಮಾತಾನಾನಂದಮಯೀ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋ‌ರ್ ಕುಮಾ‌ರ್ ಪುತ್ತೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ, ಉದ್ಯಮಿ ಉಜ್ವಲ್ ಪ್ರಭು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು ,ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ, ಒಡಿಯೂರು ಗ್ರಾಮ ವಿಕಾಸ ಯೋಜನೆ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಷ್ ಭಂಡಾರಿ, ಮಾಜಿ ಶಾಸಕ ಸಂಜೀವ ಮಠಂದೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸನ್ಮಾನ: ಮಾಜಿ ಪುರಸಭೆಯ ಅಧ್ಯಕ್ಷ ರಾಜೇಶ್ ಬನ್ನೂರು, ಸಂಗೀತ ಕ್ಷೇತ್ರದ ಸಾಧಕಿ ಸಮನ್ನಿ ರೈ, ಕ್ರೀಡಾಪಟು ಸಮೃದ್ಧಿ ಜೆ.ಶೆಟ್ಟಿ ಹಾಗೂ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸದಸ್ಯರೊಬ್ಬರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.ಮಧ್ಯಾಹ್ನ ಗಂಟೆ 1ರಿಂದ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಇದೇ ಸಂದರ್ಭ ಪ್ರಸಾದ ಭೋಜನ ವಿತರಣೆ ನಡೆಯಲಿದೆ ಎಂದು ಗುರುದೇವ ಸೇವಾ ಬಳಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here