ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ

0

ನೆಲ್ಯಾಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ.ಕ ಕರ್ನಾಟಕ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನ.15 ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಯದಲ್ಲಿ ಆರಂಭಗೊಂಡಿದೆ.


ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.


ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಸಾಮಾಜಿಕ ಕಾರ್ಯಕರ್ತ ರಘು , ಧರ್ಮಗುರುಗಳಾದ ರೆ.ಫಾ.ಆದರ್ಶ ಜೋಸೆಫ್, ರೆ.ಫಾ.ಸಿಬಿ, ಮಹಮ್ಮದ್ ಆಲಿ ಹೊಸಮಠ, ಜಿ ಪಂ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಪಿ ಪಿ ವರ್ಗೀಸ್, ಸರ್ವೋತ್ತಮ ಗೌಡ, ಆಶಾ ತಿಮ್ಮಪ್ಪ ಗೌಡ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ರಾಜಕೀಯ ಮುಖಂಡರಾದ ಎ ವಿ ತೀರ್ಥ ರಾಮ, ವೆಂಕಪ್ಪ ಗೌಡ ಸುಳ್ಯ, ವೆಂಕಟ್ ವಳಲಂಬೆ, ಸುಧೀರ್ ಕುಮಾರ್ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿದ್ದರು.


ಕಿಶೋರ್ ಕುಮಾರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಸಯ್ಯದ ಮೀರಾ ಸಾಹೇಬ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here