ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ವತಿಯಿಂದ ನ.14ರಂದು ಮಕ್ಕಳ ದಿನಾಚರಣೆಯನ್ನು ಕ್ಲಬ್ ಅಧ್ಯಕ್ಷರಾದ ಸುರೇಶ್ ಪಿ.ರವರ ಅಧ್ಯಕ್ಷತೆಯಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುದಾನ ವಸತಿಯುತ ಶಾಲೆಯ ಸಂಚಾಲಕರಾದ ರೆ| ವಿಜಯ್ ಹಾರ್ವಿನ್ ರವರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ, ಶಿಕ್ಷಕರ ಮತ್ತು ಸಮಾಜದ ಪಾತ್ರ ಈ ಕುರಿತು ಉಪನ್ಯಾಸವನ್ನು ನೀಡಿದರು. ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಕ್ಲಬ್ ಸದಸ್ಯ ಚಂದ್ರಶೇಖರ ಮೂರ್ತಿರವರು ನೀಡಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಕ್ಲಬ್ ವತಿಯಿಂದ ಬೆಟ್ಟಂಪಾಡಿ ಸರಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಂತರ್‌ರಾಷ್ಟ್ರೀಯ ಜಿಲ್ಲೆ 3181, ವಲಯ 5 ರ ಸಹಾಯಕ ಗವರ್ನರ್‌ಗಳಾದ ಸೂರ್ಯನಾಥ ಆಳ್ವ, ಕೆ.ವಿನಯ್ ಕುಮಾರ್, ಡಾ. ಹರ್ಷಕುಮಾರ್ ರೈ ಮಾಡಾವು, ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿಜಯ್ ಕುಮಾರ್ ರೈ ಉಪಸ್ಥಿತರಿದ್ದರು. ಅಶೋಕ್ ಆಚಾರ್ಯ ಪ್ರಾರ್ಥಿಸಿದರು. ವಲಯ ಸೇನಾನಿ ವೆಂಕಟರಮಣ ಗೌಡ ಕಳುವಾಜೆರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದರು. ಕಾರ್ಯದರ್ಶಿ ಸೆನೋರಿಟಾ ಆನಂದ್ ವರದಿ ಮಂಡಿಸಿದರು. ಮಾಜಿ ಅಧ್ಯಕ್ಷರಾದ ಸುಂದರ ರೈ ಬಲ್ಕಾಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಆಸ್ಕರ್ ಆನಂದ್, ಸರಕಾರಿ ಪ್ರೌಢ ಶಾಲೆ ಬೆಟ್ಟಂಪಾಡಿ ಇದರ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ಹಾಗೂ ಕ್ಲಬ್‌ನ ಸದಸ್ಯರು ಹಾಜರಿದ್ದರು.