
ನೆಲ್ಯಾಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ ಕ ಕರ್ನಾಟಕ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನ.15 ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಯದಲ್ಲಿ ಆರಂಭಗೊಂಡಿದ್ದು ಮನವಿ ಸ್ವೀಕರಿಸಲು ಸಹಾಯಕ ಆಯುಕ್ತರು ಬರುವಲ್ಲಿ ವಿಳಂಬವಾದ್ದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಗುಂಡ್ಯದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುತ್ತಿದ್ದಾರೆ.

