ಪುತ್ತೂರು:ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಹಾಗೂ ಪುಣಚ ಪ್ರಾಥಮಿಕ ವ್ಯವಸಾಯ ಸೇವಾಹ ಸಹಕಾರಿ ಸಂಘ ಮತ್ತು ಬಂಟ್ವಾಳ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಬಂಟ್ವಾಳ ತಾಲೂಕಿನ ವಿವಿಧ ರೀತಿಯ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವು ನ.17ರಂದು ಪುಣಚ ಪರಿಯಾಲ್ತಡ್ಕ ಅನುದಾನಿತ ಹಿ.ಪ್ರಾ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಪ್ರಾರಂಭದಲ್ಲಿ ಮೆರವಣಿಗೆ ನಡೆಯಲಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಹಕಾರ ಸಪ್ತಾಹದ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಮೆರವಣಿಗೆಯು ಸಂಘದ ವಠಾರದಿಂದ ಹೊರಟು ಪರಿಯಾಲ್ತಡ್ಕ ಜಂಕ್ಷನ್ ಸಾಗಿ ಅಲ್ಲಿಂದ ಸಮಾರಂಭದ ಶಾಲಾ ವಠಾರಕ್ಕೆ ಸಾಗಿ ಬರಲಿದೆ.
ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ ರಾಜಾರಾಮ್ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರಿ ಭಾರತಿ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್ ಎಸ್.ಆರ್ ಸತೀಶ್ಚಂದ್ರ ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಸ್ಕ್ಯಾಡ್ಸ್ ಮಂಗಳೂರು ಹಗೂ ಟಿಎಪಿಸಿಎಂಎಸ್ ಅಧ್ಯಕ್ಷ ರವೀಂದ್ರ ಕಂಬಳಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಪದ್ಮಶೇಖರ ಜೈನ್, ಪುರುಷೋತ್ತಮ ಸಾಲಿಯಾನ್, ವೆಂಕಪ್ಪ ನಾಯ್ಕ, ಸಹಕಾರ ಸಂಘಗಳ ಉಪ ನಿಬಂಧಕ ಹೆಚ್.ಎನ್ ರಮೇಶ್, ಬಂಟ್ವಾಳ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿ’ಸೋಜ, ಸಹಕಾರ ಸಂಘಗಳ ಸಹಾಯಕ ನಿರ್ದೇಶಕ ಜೆ.ಸುಧೀರ್ ಕುಮಾರ್, ಪುಣಚ ಗ್ರಾ.ಪಂ ಅಧ್ಯಕ್ಷೆ ಬೇಬಿ, ಕೇಪು ಗ್ರಾ.ಪಂ ಅಧ್ಯಕ್ಷ ರಾಘವ, ಬಂಟ್ವಾಳ ಸಹಕಾರ ಅಭಿವೃದ್ಧಿ ಅಧಿಕಾರಿ ಡಾ|ಜ್ಯೋತಿ, ಸಹಕಾರ ಸಂಘಗಳ ಬಂಟ್ವಾಳ ವಲಯ ಮೇಲ್ವೀಚಾರಕ ಕೀರ್ತಿರಾಜ್, ವಿಟ್ಲ ವಲಯ ಮೇಲ್ವಿಚಾರಕ ಯೋಗೀಶ್ ಹೆಚ್. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕೃಷಿ ಮತ್ತು ಉದ್ಯಮ ಕ್ಷೇತ್ರದಲ್ಲಿ ರವಿಶಂಕರ ಶಾಸ್ತ್ರೀ ಮಣಿಲ, ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಿಂದ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ ಎಸ್., ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ. ತಿಮ್ಮಪ್ಪ ನಾಯ್ಕ, ದೈವ ನರ್ತಕ ಅಣ್ಣು ಅಜಿಲ, ಘನತ್ಯಾಜ ಘಟಕದ ವಾಹನ ಚಾಲಕರಾದ ಪುಣಚ ಗ್ರಾ.ಪಂನ ಉಷಾ, ಕೇಪು ಗ್ರಾ.ಪಂನ ಶಶಿಕಲಾರವರನ್ನು ಸನ್ಮಾನಿಸಲಾಗುವುದು ಎಂದು ಸಹಕಾರಿ ಸಂಘದ ಪ್ರಕಟಣೆ ತಿಳಿಸಿದೆ.