ಉಪ್ಪಿನಂಗಡಿ: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಉಪ್ಪಿನಂಗಡಿ ಹೋಬಳಿ ಘಟಕದ ಆಶ್ರಯದಲ್ಲಿ ನವೆಂಬರ್ 16ರಂದು ’ಕನ್ನಡ ಕಲರವ’ ಕಾರ್ಯಕ್ರಮವು ನಡೆಯಲಿದೆ.
ಉಪ್ಪಿನಂಗಡಿಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಮಧ್ಯಾಹ್ನ 1.30 ರಿಂದ ಕಾರ್ಯಕ್ರಮ ನಡೆಯಲಿದ್ದು, ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷ ಕರುಣಾಕರ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಸಾಪ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಉಪನ್ಯಾಸಕ ಮಹಾಲಿಂಗೇಶ್ವರ ಭಟ್ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶಕರಾದ ಡಾ. ತಾಳ್ತಜೆ ವಸಂತ ಕುಮಾರ ಹಾಗೂ ಉಪ್ಪಿನಂಗಡಿ ಸಿ ಎ ಬ್ಯಾಂಕಿನ ಅಧ್ಯಕ್ಷ ಕೆ.ವಿ. ಪ್ರಸಾದ ಅತಿಥಿಗಳಾಗಿ ಭಾಗವಹಿಸಲಿರುವರು.
ಸಭಾ ಕಾರ್ಯಕ್ರಮದ ಬಳಿಕ ಗ್ರಾಮದ ಆಯ್ದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಹೋಬಳಿ ಘಟಕದ ಸಂಘಟನಾ ಕಾರ್ಯದರ್ಶಿ ನವೀನ್ ಬ್ರಾಗ್ಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.