ಪುತ್ತೂರು: ಜಿಲ್ಲಾ ಪಂಚಾಯತ್, ಒಳಮೊಗ್ರು ಗ್ರಾಮ ಪಂಚಾಯತ್, ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಒಳಮೊಗ್ರು ಇವುಗಳ ಸಹಯೋಗದಲ್ಲಿ ಗ್ರಾಮ ಪಂಚಾಯತ್ ಮಟ್ಟದ ಗ್ರಾಮ ಆರೋಗ್ಯ ಕಾರ್ಯಪಡೆಯ ಸದಸ್ಯರುಗಳಿಗೆ ತರಬೇತಿಯು ನ.13ರಂದು ಒಳಮೊಗ್ರು ಗ್ರಾಪಂ ಕಛೇರಿಯಲ್ಲಿ ನಡೆಯಿತು. ಆರೋಗ್ಯ ಇಲಾಖೆಯ ಸಿಎಚ್‌ಒ ವಿದ್ಯಾಶ್ರೀಯವರು ತರಬೇತಿ ನಡೆಸಿಕೊಟ್ಟರು.
ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಜಲಜಾಕ್ಷಿ, ಗ್ರಾಪಂ ಕಾರ್ಯದರ್ಶಿ ಜಯಂತಿ, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರುಗಳಾದ ಮಹೇಶ್ ರೈ ಕೇರಿ, ಶೀನಪ್ಪ ನಾಯ್ಕ, ವಿನೋದ್ ಶೆಟ್ಟಿ ಮುಡಾಲ, ರೇಖಾ, ಸುಂದರಿ, ನಳಿನಾಕ್ಷಿ, ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು, ಅಂಗವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯಗುರುಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿಗಳು ಸಹಕರಿಸಿದ್ದರು.