ಬೆಟ್ಟಂಪಾಡಿ:ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕಗಳ ವತಿಯಿಂದ ಸ್ವಯಂಸೇವಕರಿಗೆ ಕೃಷಿ ವಲಯದಲ್ಲಿ ಉದ್ಯಮಶೀಲತೆಯ ಅವಕಾಶ ಎಂಬ ಕಾರ್ಯಕ್ರಮ ನಡೆಯಿತು.
ಎನ್ಎಸ್ಎಸ್ ಯೋಜನಾಧಿಕಾರಿ ಯೋಗೀಶ್ ಎಲ್ ಏನ್ ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ಮಾತುಗಳನ್ನಾಡಿದರು.ಐದು ವರ್ಷಗಳಿಂದ ಜೇನು ಕೃಷಿಯಲ್ಲಿ ತೊಡಗಿಕೊಂಡಿರುವ,ವಿವಿದೆಡೆ ತರಬೇತುದಾರನಾಗಿ, ಜೇನು ಉಪ ಉತ್ಪನ್ನಗಳ ತಯಾರಿ ಮತ್ತು ಮೌಲ್ಯವರ್ಧನೆಯಲ್ಲಿ ತೊಡಗಿಸಿಕೊಂಡಿರುವ ಸಂಪನ್ಮೂಲ ವ್ಯಕ್ತಿ ಭರತ್ ರಾಜ್ ಸ್ವಯಂಸೇವಕರಿಗೆ ಜೇನು ಕೃಷಿಯ ಬಗ್ಗೆ ಮಾಹಿತಿ ನೀಡಿದರು.
ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಾಣಿಜ್ಯ ಶಾಸ್ತ್ರದ ಮುಖ್ಯಸ್ಥ ರಾಮಚಂದ್ರ ಅಧ್ಯಕ್ಷೀಯ ಮಾತುಗಳ ಜೊತೆಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕೃತಿ ಸ್ವಾಗತಿಸಿದರು ಹಾಗೂ ಪ್ರಜ್ಞಾ ವಂದಿಸಿದರು. ಪ್ರತೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು.