ರಾಮಕುಂಜ: ಡಿಪಾರ್ಟ್ಮೆಂಟ್ ಆಫ್ ಯೂತ್ ಎಂಪೈರ್ಮೆಂಟ್ ಆಂಡ್ ಸ್ಪೋರ್ಟ್ಸ್ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಸಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನ.14ರಿಂದ 18ರ ತನಕ ನಡೆದ 3ನೇ ಮಿನಿ ಒಲಂಪಿಕ್ ಕಬಡ್ಡಿ ಚಾಂಪಿಯನ್ ಶಿಪ್ನಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಲ್ ಇಂಡಿಯಾ ಟೂರ್ನಮೆಂಟ್ಗೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಹಾವೇರಿ ತಂಡವನ್ನು ಪ್ರತಿನಿಧಿಸಿದ ಸಂಸ್ಥೆಯ ವಿದ್ಯಾರ್ಥಿನಿ ಧನ್ವಿ ಎಂ(ಕೊಣಾಜೆ ಮಣೆಜಾಲು ದುಗ್ಗಣ್ಣ ಗೌಡ ಮತ್ತು ಅಮಿತಾ ದಂಪತಿಯ ಪುತ್ರಿ)ಹಾಗೂ ಬಾಲಕರ ವಿಭಾಗದಲ್ಲಿ ತುಮಕೂರು ತಂಡವನ್ನು ಪ್ರತಿನಿಧಿಸಿದ ಸಂಸ್ಥೆಯ ವಿದ್ಯಾರ್ಥಿ ಸಮರ್ಥ್ ಬಾಹುಬಲಿ ಯಲ್ಲಟ್ಟಿ (ಹಳಿಂಗಳಿ ಬಾಹುಬಲಿ ಯಲ್ಲಟ್ಟಿ ಹಾಗೂ ಶೋಭಾ ಯಲ್ಲಟ್ಟಿ ದಂಪತಿಯ ಪುತ್ರ )ಅವರು ಉತ್ತಮ ಪ್ರದರ್ಶನ ನೀಡುವ ಮೂಲಕ ಆಲ್ ಇಂಡಿಯಾ ಟೂರ್ನಮೆಂಟ್ಗೆ ಆಯ್ಕೆಯಾಗಿದ್ದು, ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇಬ್ಬರು ಪ್ರತಿನಿಧಿಸಿದ ತಂಡಗಳು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿವೆ.
- ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಅವರು ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದವರು, ಆಡಳಿತ ಮಂಡಳಿಯವರು, ಶಾಲಾ ಪೋಷಕರು, ಹಿರಿಯ ವಿದ್ಯಾರ್ಥಿಗಳು ವಿವಿಧ ರೀತಿಯಲ್ಲಿ ಸಹಕರಿಸಿದ್ದರು.