ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು ಮತ್ತು ಅಶ್ವಿನ್ ನೇತ್ರ ಚಿಕಿತ್ಸಾಲಯ ಬಿಸಿ ರೋಡ್ ಇವರ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರವು ನ.24ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಶ್ರೀ ಸತ್ಯಸಾಯಿ ಮಂದಿರದಲ್ಲಿ ನಡೆಯಲಿದೆ.
ಪೂರ್ವಾಹ್ನ ಗಂಟೆ 8.30 ರಿಂದ 11.30 ರವರೆಗೆ ದಾಖಲಾತಿ ನಡೆಯಲಿದೆ. ಶಿಬಿರದಲ್ಲಿ ಲಭ್ಯ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು. ಡಿ.10ರಂದು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಕಣ್ಣುಪೊರೆ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.