ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತು ಒಳಮೊಗ್ರು ಇದರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕರ ಆಯ-ವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಗ್ರಾಮಸಭೆಯು ನ.25ರಂದು ಬೆಳಿಗ್ಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಲಿರುವುದು. ಮುಂದಿನ ಆರ್ಥಿಕ ವರ್ಷದಲ್ಲಿ (2025-26ನೇ ಸಾಲಿನಲ್ಲಿ) ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಗ್ರಾಮ ಸಭೆಯಲ್ಲಿ ಭಾಗವಹಿಸಿ, ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಪ್ರಸ್ತಾವನೆಗಳನ್ನು ಸಲ್ಲಿಸಬೇಕಾಗಿರುತ್ತದೆ. ಆದ ಕಾರಣ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅರ್ಜಿ ಮತ್ತು ಆರ್.ಟಿ.ಸಿ ಲಗತ್ತಿಸಿ ಕಾಮಗಾರಿ ಬೇಡಿಕೆಗಳನ್ನು ಗ್ರಾಮ ಸಭೆಯಲ್ಲಿ ನೀಡುವಂತೆ ಗ್ರಾಪಂ ಪ್ರಕಟಣೆ ತಿಳಿಸಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.