ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ’ವಾರ್ಷಿಕೋತ್ಸವ 2024-25’ ನ.26 ಮತ್ತು 27ರಂದು ನಡೆಯಲಿದೆ.
ನ.26ರಂದು ಪ್ರತಿಭಾ ಪುರಸ್ಕಾರ ನಡೆಯಲಿದ್ದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಕೃಷ್ಣ ಶೆಟ್ಟಿ ಕಡಬ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ಎನ್.ಕೆ., ಹಿರಿಯ ವಿದ್ಯಾರ್ಥಿಗಳಾಗಿರುವ ನ್ಯಾಯವಾದಿ ಪ್ರದೀಪ್ ಕೆ.ಎಲ್., ಕೇಂದ್ರ ಮೀಸಲು ಪೊಲೀಸ್ ಪಡೆಯ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಕಾಸಿಂ ಕೆ., ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಸುಂದರ ಶೆಟ್ಟಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30ರಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ನ.27ರಂದು ಬೆಳಿಗ್ಗೆ 9 ಗಂಟೆಯಿಂದ ಪಿಯುಸಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿಶ್ರಾಂತ ಮುಖ್ಯಸ್ಥರು, ಕನಕ ಗೌರವ ಪ್ರಶಸ್ತಿ ಪುರಸ್ಕೃತರೂ ಆದ ಡಾ| ತಾಳ್ತಜೆ ವಸಂತ ಕುಮಾರ, ವಿಧಾನಪರಿಷತ್ ಸದಸ್ಯ ಕಿಶೋರ್‌ಕುಮಾರ್ ಬೊಟ್ಯಾಡಿ, ಹಿರಿಯ ವಿದ್ಯಾರ್ಥಿಗಳಾಗಿರುವ ವಿಟ್ಲ ನಾಡಕಚೇರಿ ಉಪತಹಶೀಲ್ದಾರ್ ವಿಜಯ ವಿಕ್ರಮ್ ಜಿ.ಗಾಂಧಿಪೇಟೆ, ಪ್ರಗತಿಪರ ಕೃಷಿಕ ಉದಯಶಂಕರ ಭಟ್ ಬಲ್ಲಾಳಿಕೆ, ಚಾರ್ಟರ್ಡ್ ಅಕೌಂಟೆಂಟ್ಸ್ ಮಹೇಶ್ ಕುಮಾರ್ ಬಿ., ಚಿಕ್ಕಮಗಳೂರು ಕೈಮರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರತ್ಯಕ್ಷ ಭೈರವ, ಇಂಜಿನಿಯರಿಂಗ್ ಇಂಟ್ಯೂಟ್ ನಿರ್ದೇಶಕ ಸುದತ್ತ ಗೌತಮ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಮನಮೋಹನ ರೈ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರಿತಾ ಜನಾರ್ದನ್ ಅವರಿಗೆ ಸನ್ಮಾನ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.