ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು. ಗ್ರಾಮ ಪಂಚಾಯತ್ ಕಾರ್ಯಾಲಯ ಪುಣಚ ಇದರ 2024-25ನೇ ಸಾಲಿನ ಪ್ರಥಮ ಸುತ್ತಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಕೇಂದ್ರ ಸರಕಾರದ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ನ. 27 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಪುಣಚ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಉದ್ಯೋಗ ಚೀಟಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಂಚಾಯತ್ ಅಧ್ಯಕ್ಷೆ ಯಶೋಧ ಯಾನೆ ಬೇಬಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಪಾರ್ವತಿ ಕೆ, ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.