ಒಳಮೊಗ್ರು ಗ್ರಾಪಂನಲ್ಲಿ ಭಾರತೀಯ ಸಂವಿಧಾನ ದಿನ ಆಚರಣೆ

0

ಪುತ್ತೂರು: ರಾಷ್ಟ್ರದ ಸಂವಿಧಾನದ ಅಂಗೀಕಾರದ ನೆನಪಿಗಾಗಿ ಭಾರತದಲ್ಲಿ ನ.26 ಅನ್ನು ಭಾರತೀಯ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಒಳಮೊಗ್ರು ಗ್ರಾಮ ಪಂಚಾಯತ್‌ನಲ್ಲಿ ಸಂವಿಧಾನ ದಿನವನ್ನು ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಂವಿಧಾನ ಪೀಠಿಕೆಯನ್ನು ಇಟ್ಟು ಪ್ರಮಾಣ ವಚನ ಸ್ವೀಕರಿಸಲಾಯಿತು.

ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ, ಸದಸ್ಯರುಗಳಾದ ಶೀನಪ್ಪ ನಾಯ್ಕ, ಮಹೇಶ್ ರೈ ಕೇರಿ, ಲತೀಫ್ ಕುಂಬ್ರ, ಶಾರದಾ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here