ಪುತ್ತೂರು ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆ

0

ಪುತ್ತೂರು: ಭಾರತೀಯ ಸಂವಿಧಾನ ದಿನಾಚರಣೆಯ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಪುತ್ತೂರು ವಕೀಲರ ಸಂಘದ ಆಶ್ರಯದಲ್ಲಿ ನ್ಯಾಯಾಲಯ ಸಂಕೀರ್ಣದಲ್ಲಿರುವ ಪರಾಶರ ಹಾಲ್‌ನಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.


5ನೇ ಹೆಚ್ಚವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಪ್ರೀಯಾರವಿ ಜೋಗ್ಲೇಕರ್, ಸಿವಿಲ್ ನ್ಯಾಯಾಧೀಶೆ ಅರ್ಚನಾ ಕೆ ಉನ್ನಿತಾನ್,
ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ವೈ ಎಚ್, ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಮತ್ತು ಜೆ.ಎಮ್.ಎಫ್.ಸಿ ಶಿವಣ್ಣ ಹೆಚ್.ಆರ್, 2ನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಮತ್ತು ಜೆ.ಎಂ.ಎಫ್.ಸಿ ಯೋಗೇಂದ್ರ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಜಿ ಜಗನ್ನಾಥ ರೈ, ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಉಪಾಧ್ಯಕ್ಷ ಮೋನಪ್ಪ ಯಂ, ಜೊತೆ ಕಾರ್ಯದರ್ಶಿ ಮಮತಾ ಸುವರ್ಣ ಸಹಿತ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಕೀಲ ಶ್ರೀಗಿರೀಶ್ ಮಳಿ ಅವರು ಕಾನೂನು ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here