ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನಲ್ಲಿ ಬಿ. ಎಸ್ಸಿ ನರ್ಸಿಂಗ್ ಕೋರ್ಸ್ ಗಳನ್ನು ಆರಂಭಿಸಲು ರಾಜೀವ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಮತ್ತು ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ನಿಂದ ಅನುಮೋದನೆ

0

ಪುತ್ತೂರು: ಇಲ್ಲಿನ ಬೊಳುವಾರಿನಲ್ಲಿರುವ  ಪ್ರಗತಿ ಹಾಸ್ಪಿಟಲ್  ಎಜ್ಯಕೇಶನಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನಲ್ಲಿ 2024-25 ನೇ ಸಾಲಿನಿಂದ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಗಳನ್ನು ಆರಂಭಿಸಲು ರಾಜೀವ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ನಿಂದ ಹಾಗೂ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ನಿಂದ ಅನುಮೋದನೆ ದೊರೆತಿದೆ. 

ಪುತ್ತೂರಿನ ಬೊಳುವಾರಿನಲ್ಲಿರುವ  ಪ್ರಗತಿ ಹಾಸ್ಪಿಟಲ್ ಎಜುಕೇಷನ್‌ ಟ್ರಸ್ಟ್‌ನ ಮೂಲಕ 2013ರಲ್ಲಿ  ಪ್ರಗತಿ ಪ್ಯಾರ ಮೆಡಿಕಲ್ ಕಾಲೇಜನ್ನು ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೊಮಾ ಇನ್ ಆಪರೇಷನ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ ಹಾಗೂ ಡಿಪ್ಲೊಮಾ ಇನ್ ಆಪ್ತಾಲ್ಮಿಕ್ ಟೆಕ್ನಾಲಜಿ ಕೋರ್ಸ್ಗಳನ್ನು ಆರಂಭಿಸಲಾಗಿದೆ. ರಾಜೀವ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್‌ನಿಂದ ಅಂಗೀಕೃತಗೊಂಡ ಪುತ್ತೂರು ತಾಲೂಕಿನ ಏಕೈಕ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಪ್ರಗತಿ ಇನ್ಸಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ 2022ನೇ ಸಾಲಿನಿಂದ ಕಾರ್ಯ ನಿರ್ವಹಿಸುತ್ತಿದ್ದು, ಬಿ.ಎಸ್ಸಿ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಬಿ.ಎಸ್ಸಿ ಇನ್ ಆಪರೇಷನ್ ಥಿಯೇಟರ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಬಿಎಸ್ಪಿ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ಹಾಗೂ ಬಿಎಸ್ಸಿ ಇನ್ ಎಮರ್ಜೆನ್ಸಿ ಮತ್ತು ಟ್ರಾಮಾ ಕೇ‌ರ್ ಟೆಕ್ನಾಲಜಿ ಕೋರ್ಸ್‌ಗಳು ಲಭ್ಯವಿದೆ. 

ಎಲ್ಲಾ ಅತ್ಯಾಧುನಿಕ ಸೌಕರ್ಯಗಳನ್ನು ಸಂಸ್ಥೆ ನೀಡುತ್ತಿದ್ದು ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಉತ್ತಮ ಪ್ರಯೋಗಾಲಯ, ಗ್ರಂಥಾಲಯವನ್ನು ಒಳಗೊಂಡಿದೆ ಉತ್ತಮ ಹಾಸ್ಟೆಲ್ ಸೌಲಭ್ಯ ಮತ್ತು  ಬಸ್ಸು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 

100 ಹಾಸಿಗೆಗಳ NABH ಅಂಗೀಕೃತ ಮಾತೃ ಸಂಸ್ಥೆ ಪ್ರಗತಿ ಸ್ಪೆಶಾಲಿಟಿ ಹಾಸ್ಪಿಟಲ್ ವಿದ್ಯಾರ್ಥಿಗಳ ಪ್ರಾಯೋಗಿಕ ತರಬೇತಿ ಸಹಕಾರಿಯಾಗಿದೆ.ಟ್ರಸ್ಟಿಗಳಾದ ಡಾ.ಸುಧಾ ಎಸ್ ರಾವ್, ಡಾ. ಸ್ಮಿತಾ ಎಸ್ ರಾವ್ ಮತ್ತು ಡಾ. ಅಭೀಶ್ ವರ್ಮಾ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಸಂಸ್ಥೆ ಕಾರ್ಯನಿರ್ವಹಿಸಲಿದೆ ಎಂದು ಪ್ರಗತಿ‌ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರು, ಹಿರಿಯ ವೈದ್ಯರು, ಹೃದ್ರೋಗ ತಜ್ಞರಾದ ಡಾ. ಯು‌. ಶ್ರೀಪತಿ ರಾವ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾಖಲಾತಿ ಆರಂಭಗೊಂಡಿದೆ
ಈಗಾಗಲೇ ದಾಖಲಾತಿ ಆರಂಭಗೊಂಡಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9483787876ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here