ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಪುತ್ತೂರು ಘಟಕದ ವತಿಯಿಂದ ಭಾಷಣ ಸ್ಪರ್ಧೆಯು ನ.24ರಂದು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು.
ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು ವಂ|ಲೋಹಿತ್ ಅಜಯ್ ಮಸ್ಕರೇನ್ಹಸ್ ರವರು ಭಾಷಣ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಪ್ರದರ್ಶಿಸಲು ಕಥೋಲಿಕ್ ಸಭಾ ಪ್ರತಿ ವರ್ಷ ಭಾಷಣ ಸ್ಪರ್ಧೆಯನ್ನು ಏರ್ಪಡಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.
ತೀರ್ಪುಗಾರರಾಗಿ ಕೊಕ್ಕಡ ಕಥೋಲಿಕ್ ಸಭಾ ಘಟಕದ ಅಪೋಲಿನ್ ಮಾರ್ಟಿಸ್ ಹಾಗೂ ಲವೀನಾ ಹಾಜರಿದ್ದರು. ಕಥೋಲಿಕ್ ಸಭಾ ಪುತ್ತೂರು ಘಟಕದ ಅಧ್ಯಕ್ಷ ಪ್ರೊ|ಝೇವಿಯರ್ ಡಿ’ಸೋಜ ಸ್ವಾಗತಿಸಿ, ಕಾರ್ಯದರ್ಶಿ ಬಬಿತಾ ಡಿಕ್ರೂಝ್ ವಂದಿಸಿದರು. ಘಟಕದ ಸದಸ್ಯ ಪಾವ್ಲ್ ಹೆರಾಲ್ಡ್ ಮಸ್ಕರೇನ್ಹಸ್ ಭಾಷಣ ಸ್ಪರ್ಧೆಯ ಉಸ್ತುವಾರಿ ವಹಿಸಿದ್ದರು. ಈ ಭಾಷಣ ಸ್ಪರ್ಧೆಯಲ್ಲಿ 16 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದರು. ಪುತ್ತೂರು ಘಟಕದ ಹಿರಿಯ ಮಾಜಿ ಅಧ್ಯಕ್ಷ ವಲೇರಿಯನ್ ಡಾಯಸ್ ಸಹಿತ ಘಟಕದ ಸದಸ್ಯರು ಉಪಸ್ಥಿತರಿದ್ದರು.