ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ

0

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವಣ ಯೋಗ ಶಿಕ್ಷಣದ ಕುರಿತಾದ ಒಪ್ಪಂದ ಮಾಡಿಕೊಳ್ಳಲಾಯಿತು. ಬುಧವಾರ ಬೆಂಗಳೂರಿನ ಆಟ್ ಆಫ್ ಲಿವಿಂಗ್‌ನ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ ಗುರೂಜಿಯವರು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಅವರಿಗೆ ಒಪ್ಪಂದ ಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡ ಸುಮಾರು ಎಪ್ಪತ್ತು ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.ಕಳೆದ ಹದಿನಾಲ್ಕು ವರ್ಷಗಳಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಯೋಗಶಿಕ್ಷಣವನ್ನು ಒದಗಿಸಿಕೊಡಲಾಗುತ್ತಿದೆ. ಪ್ರತಿ ವರ್ಷವೂ ಶೈಕ್ಷಣಿಕ ಚಟುವಟಿಕೆಗಳ ಆರಂಭದ ದಿನಗಳಲ್ಲಿ ಮೂಲಭೂತ ಯೋಗ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡುವ ಕಾರ್ಯವನ್ನು ಅಂಬಿಕಾ ಸಂಸ್ಥೆಗಳು ಮಾಡಿಕೊಂಡು ಬರುತ್ತಿವೆ. ಇದಲ್ಲದೆ ಪ್ರತಿನಿತ್ಯ ತರಗತಿ ಆರಂಭಕ್ಕೂ ಮುನ್ನ ನಿಗದಿತ ಸಮಯದ ಯೋಗಾಭ್ಯಾಸವನ್ನು ನಡೆಸಲಾಗುತ್ತಿದೆ. ಪಠ್ಯಕ್ರಮದಲ್ಲಿ ಯೋಗವನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ಸಂಸ್ಥೆಯಾಗಿ ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ದಾಖಲೆ ಬರೆದಿವೆ. ಇದೀಗ ಆರ್ಟ್ ಆಫ್ ಲಿವಿಂಗ್ ಹಾಗೂ ಅಂಬಿಕಾ ಸಂಸ್ಥೆಗಳ ನಡುವೆ ಅಧಿಕೃತ ಒಪ್ಪಂದ ನಡೆದಿದ್ದು, ಮುಂದಿನ ದಿನಗಳಲ್ಲಿ ಅಂಬಿಕಾ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಯೋಗಾಭ್ಯಾಸ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ.

LEAVE A REPLY

Please enter your comment!
Please enter your name here