ವಿಟ್ಲ: ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಕ್ರಿಯಾಯೋಜನೆ ತಯಾರಿಯ ವಿಶೇಷ ಗ್ರಾಮ ಸಭೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಸಮಿತ ಡಿ ಪೂಜಾರಿ ರವರ ಅಧ್ಯಕ್ಷತೆಯ ಲ್ಲಿ ನಡೆಯಿತು.
ಸಭೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಬಹುದಾದ ವಿವರ ಮತ್ತು ಮಾಹಿತಿಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಅನುಷಾ ಡಿ , ಕಾರ್ಯದರ್ಶಿ ವಿಮಲ ಪಿ , ನರೇಗಾ ತಾಲೂಕು ಐಇಸಿ ಸಂಯೋಜಕರಾದ ರಾಜೇಶ್, ಗ್ರಾ. ಪಂ.ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.