





ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಪುತ್ತೂರು ಹಾಗೂ ಕಡಬ ತಾಲೂಕು ಇದರ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಮಾವೇಶ, ನಿವೃತ್ತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ನೆರವು ವಿತರಣಾ ಕಾರ್ಯಕ್ರಮ ಡಿ.1ರಂದು ಅಪರಾಹ್ನ 12 ಗಂಟೆಗೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ.
ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಕಮಲ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು, ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾೖಕ್, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಪ್ರೇಮ ಶಿವಮೊಗ್ಗ, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಉಸ್ಮಾನ್ ಎ., ದ.ಕ. ಜಿಲ್ಲಾ ನಿರೂಪಣಾಧಿಕಾರಿ ಕುಮಾರ್, ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಲ ಕಾಳೆ, ಮಂಗಳೂರು ಅಂಗನವಾಡಿ ಕಾರ್ಯರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ತಾರಾ ಬಲ್ಲಾಳ್ ಭಾಗವಹಿಸಲಿದ್ದಾರೆ ಎಂದು ತಾಲೂಕು ಅಧ್ಯಕ್ಷೆ ಕಮಲ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.











