ಬಡಗನ್ನೂರು: ಬಡಗನ್ನೂರು ಗ್ರಾ.ಪಂ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕರ ಆಯ-ವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ರವರ ಅಧ್ಯಕ್ಷತೆಯಲ್ಲಿ ನ.30 ರಂದು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.
ಮುಂದಿನ ಆರ್ಥಿಕ ವರ್ಷದಲ್ಲಿ ( 2025-26ನೇ ಸಾಲಿನಲ್ಲಿ) ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚಿಸಲಾಯಿತು. ಉದ್ಯೋಗ ಖಾತರಿ ಯೋಜನೆಯ ಯೋಜನಾ ನಿರ್ದೇಶಕಿ ಶೈಲಜಾ ಭಟ್ ಯೋಜನೆ ಬಗ್ಗೆ ಮಾಹಿತಿ ನೀಡಿ ಮಾತನಾಡಿ ತಮ್ಮ ಜಮೀನಿನಲ್ಲಿ ಮಲ್ಲಿಗೆ, ವೀಳ್ಯದೆಲೆ, ಗೇರು ಕೃಷಿ, ಡ್ರಾಗನ್ ಫ್ರುಟ್, ರಂಬುಟಾನ್ ಇತ್ಯಾದಿಗಳನ್ನು ಕೂಡ ಬೆಳೆಯಬಹುದು ಎಂದರು. ಬಾಳೆಯಲ್ಲಿ ಅಂಗಾಂಶ ಕೃಷಿ ಬಾಳೆಗೆ ಮಾತ್ರ ಅವಕಾಶವಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಬಹುವಾರ್ಷಿಕ ಬೆಳೆಗಳಿಗೆ ಮಾತ್ರ ಅವಕಾಶವಿದ್ದು ಕನಿಷ್ಠ 3 ವರ್ಷಗಳ ಬೆಳೆಯಾದರೂ ಆಗಿರಬೇಕು ಪ್ರಸ್ತುತ ಇದರ ಅವಧಿಯನ್ನು 5 ವರ್ಷಕ್ಕೆ ಏರಿಸಿದ್ದಾರೆ.ಡಿ. 5 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಇಂಜಿನಿಯರ್ ಪ್ರದೀಪ್ ಮಾಹಿತಿ ನೀಡಿ ಮಾತನಾಡಿ, ಗ್ರಾಮಸ್ಥರು ಉದ್ಯೋಗ ಖಾತರಿಯ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ನರೇಗಾ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು.ವೇದಿಕೆಯಲ್ಲಿ ಉಪಾಧ್ಯಕ್ಷೆ ಸುಶೀಲಾ ಪಕ್ಯೋಡ್ ಉಪಸ್ಥಿತರಿದ್ದರು.
ಸಭೆಯಲ್ಲಿ ಸದಸ್ಯರಾದ ರವಿರಾಜ ರೈ ಸಜಂಕಾಡಿ ಸಂತೋಷ್ ಆಳ್ವ ಗಿರಿಮನೆ, ವೆಂಕಟೇಶ್ ಕನ್ನಡ್ಕ, ಕುಮಾರ ಅಂಬಟೆಮೂಲೆ, ರವಿಚಂದ್ರ ಸಾರೆಪ್ಪಾಡಿ, ಹೇಮಾವತಿ ಮೋಡಿಕೆ,ಲಿಂಗಪ್ಪ ಗೌಡ ಮೋಡಿಕೆ, ಧರ್ಮೇಂದ್ರ ಕುಲಾಲ್ ಪದಡ್ಕ ಸುಜಾತ ಮೈಂದನಡ್ಕ, ಹಾಗೂ ಉದ್ಯೋಗ ಖಾತರಿ ಫಲಾನುಭವಿಗಳು ಉಪಸ್ಥಿತರಿದ್ದರು.ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೆಎ.ಪಿ ಸುಬ್ಬಯ್ಯ ಸ್ವಾಗತಿಸಿ ವಂದಿಸಿದರು.ಸಿಬ್ಬಂದಿಗಳಾದ ಶಾರದ ,ಅದ್ದುಲ್ ರಹಿಮಾನ್, ಹೇಮಾವತಿ ಸಿ.ಯಚ್ ಶೀಲಾವತಿ ಹಾಗೂ ಸುಕನ್ಯ ಹಾಗೂ ಪ್ರಿಯಾ ಸಹಕಾರಿಸಿದರು.
ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಎಂಬಂತೆ ಗ್ರಾಮದ ಪ್ರತಿಯೊಬ್ಬರು ಜಾಬ್ ಕಾರ್ಡ್ ಮಾಡಿಸಿಕೊಳ್ಳುವ ಮೂಲಕ ಪಂಚಾಯತ್‌ಗೆ ಅರ್ಜಿ ಸಲ್ಲಿಸಿ ತಮ್ಮ ಜಮೀನಿನಲ್ಲಿ ವೈಯುಕ್ತಿಕ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಹೇಳಿದರು.
ಬಡಗನ್ನೂರು ಗ್ರಾ.ಪಂ. ಅಧ್ಯಕ್ಷೆ ಪುಷ್ಪಲತಾ ದೇವಕಜೆ