





ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರದ 33ನೇ ಶಿಬಿರವು ಡಿ.1ರಂದು ನಡೆಯಿತು.


ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸುದ್ದಿ ಬಿಡುಗಡೆಯ ವರದಿಗಾರ ಯತೀಶ್ ಉಪ್ಪಳಿಗೆ ಮಾತನಾಡಿ, ಕಳೆದ 32 ತಿಂಗಳಿನಿಂದ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ನಡೆಯುತ್ತಿದೆ. ಈ ಶಿಬಿರವು ನಿರಂತರವಾಗಿ ನಡೆಯಲಿ. ಇನ್ನಷ್ಟು ಮಂದಿ ಈ ಶಿಬಿರದ ಪ್ರಯೋಜನ ಪಡೆಯುವಂತಾಗಲಿ ಎಂದರು.





ಅಧ್ಯಕ್ಷತೆ ವಹಿಸಿದ್ದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಎಲ್ಲರ ಸಹಕಾರದಿಂದ ಶಿಬಿರವು ನಿರಂತರವಾಗಿ ನಡೆಯುತ್ತಿದೆ. ಹಲವು ಸಂಘ ಸಂಸ್ಥೆಗಳು, ಲ್ಯಾಬೋರೇಟರಿಗಳು, ಔಷಧಿ ಕಂಪನಿಗಳು ನಮ್ಮ ಜೊತೆ ಕೈಜೋಡಿಸುತ್ತಿದ್ದು ಶಿಬಿರವು ಯಶಸ್ವಿಯಾಗಿ ನಡೆಯುವಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಸದಸ್ಯರಾದ ಲಕ್ಷ್ಮಣ್ ಬೈಲಾಡಿ, ಜಯಕುಮಾರ್ ನಾಯರ್, ವಿನ್ಯಾಸ್ ಯು.ಎಸ್, ಪ್ರೇಮ, ಶಶಿಕಲಾ ನಿರಂಜನ ರೈ, ಮುಕ್ರಂಪಾಡಿ ಸತ್ಯನಾರಾಯಣ ಪೂಜಾ ಸಮಿತಿ ಸಂತೋಷ್ ಮುಕ್ರಂಪಾಡಿ, ಆಯುರ್ವೇದ ತಜ್ಞ ವೈದ್ಯ ಡಾ.ಸಾಯಿಪ್ರಕಾಶ್ ಉಪಸ್ಥಿತರಿದ್ದರು. ಉದಯ ಕುಮಾರ್ ರೈ ಎಸ್. ಸ್ವಾಗತಿಸಿ, ವಂದಿಸಿದರು.
ಶಿಬಿರದಲ್ಲಿ ತಜ್ಞರಿಂದ ಸಾಮಾನ್ಯ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ, ಹಾಗೂ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು. ಚಿಕಿತ್ಸೆ, ಔಷಧಿಗಳ ಜೊತೆಗೆ ಶಿಬಿರದಲ್ಲಿ ಭಾಗವಹಿಸಿದವರಿಗೆ ಊಟ, ಉಪಾಹಾರವನ್ನು ನೀಡಲಾಯಿತು.
ನವಚೇತನ ಯುವಕ ಮಂಡಲ ಸಂಪ್ಯ, ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಐಕ್ಯ ಕಲಾ ಸೇವಾ ಟ್ರಸ್ಟ್ ಮೊಟ್ಟೆತ್ತಡ್ಕ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ, ಹಾಗೂ ಹಲವು ಔಷಧಿ ಕಂಪೆನಿಗಳು ಶಿಬಿರದಲ್ಲಿ ಸಹಕರಿಸಿದರು.










