ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕರ ಆಯ-ವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ವಿಶೇಷ ಗ್ರಾಮ ಸಭೆ ದ. 02 ರಂದು ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಕೆದಂಬಾಡಿ ಪಂಚಾಯತ್ ಸಭಾಂಗಣ ನಡೆಯಿತು.
ನರೇಗಾ ತಾಲೂಕು ಸಂಯೋಜಕ ಭರತ್‌ರಾಜ್‌ರವರು ಉದ್ಯೋಗ ಖಾತರಿ ಬಗ್ಗೆ ಮಾಹಿತಿ ನೀಡಿದರು. ಪ್ರತಿಯೊಬ್ಬರು ಉದ್ಯೋಗ ಚೀಟಿ ಮಾಡಿಸುವ ಮೂಲಕ ತಮ್ಮ ಜಮೀನಿನಲ್ಲಿ ವೈಯುಕ್ತಿಕ ಕಾಮಗಾರಿಗಳನ್ನು ಮಾಡಿಸುವಂತೆ ಕೇಳಿಕೊಂಡರು.
ಮುಂದಿನ ಆರ್ಥಿಕ ವರ್ಷದಲ್ಲಿ (2025-26ನೇ ಸಾಲಿನಲ್ಲಿ) ಉದ್ಯೋಗ ಖಾತರಿ ಯೋಜನೆಯಲ್ಲಿ ಕಾಮಗಾರಿಯನ್ನು ಮಾಡಲು ಅರ್ಜಿಗಳನ್ನು ಸ್ವೀಕರಿಸಲಾಯಿತು. ನರೇಗಾ ಡಿಎಫ್‌ಟಿ ಸುಮನ, ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್ ಬೀಡು, ಸದಸ್ಯರುಗಳಾದ ರತನ್ ರೈ ಕುಂಬ್ರ, ವಿಠಲ ರೈ ಮಿತ್ತೋಡಿ, ರೇವತಿ ಉಪಸ್ಥಿತರಿದ್ದರು. ಪಂಚಾಯತ್ ಗ್ರೇಡ್1 ಕಾರ್ಯದರ್ಶಿ ಸುನಂದ ಬಿ ರೈ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.