ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಬೀರಮಲೆ ಪ್ರಜ್ಞಾ ಆಶ್ರಮ, ಪುತ್ತೂರು ಸರಕಾರಿ ಆಸ್ಪತ್ರೆ ಹಾಗೂ ದ.ಕ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ವಿಶೇಷ ಚೇತನರ ದಿನಾಚರಣೆಯ ಅಂಗವಾಗಿ ವೈದ್ಯಕೀಯ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮವು ಬೀರಮಲೆಯಲ್ಲಿರುವ ಪ್ರಜ್ಞಾಶ್ರಮದಲ್ಲಿ ನಡೆಯಿತು.
ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಶಿವಣ್ಣ ಎಚ್.ಆರ್ ಅವರು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಶೇಷಚೇತನರ ಆರೋಗ್ಯ ಕಾಪಾಡುವುದು ಎಲ್ಲರ ಕರ್ತವ್ಯ ಎಂದರು.
ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಯದುರಾಜ್ ಅವರು ಮಕ್ಕಳ ಆರೋಗ್ಯದ ಬಗ್ಗೆ ವಹಿಸಿಕೊಳ್ಳಬೇಕಾದ ಅಗತ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಜಿ ಜಗನ್ನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಕೀಲರ ಸಂಘದ ಖಜಾಂಚಿ ಮಹೇಶ್ ಕೆ ಸವಣೂರು, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರಿನ ಅಧ್ಯಕ್ಷರು ಮತ್ತು ಪ್ಯಾರಾ ಲೀಗಲ್ ವಾಲೆಂಟಯರ್ ಮಹಮದ್ ರಫೀಕ್ ಉಪಸ್ಥಿತರಿದ್ದರು.
ಶಿಕ್ಷಣ ಸಂಪನ್ಮೂಲ ಕೇಂದ್ರಗಳು ಒಕ್ಕೂಟದ ಕಾರ್ಯದರ್ಶಿ ಹಾಗೂ ಪ್ಯಾರಾ ಲೀಗಲ್ ವಾಲೆಂಟಿಯರ್ ನಯನ ರೈ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಸೀಮಾ ನಾಗರಾಜ್ ಪಾನೆಲ್ ವಕೀಲರು ಪುತ್ತೂರು ವಂದಿಸಿದರು. ಪ್ರಜ್ಞಾ ಆಶ್ರಮದ ಅಣ್ಣಪ್ಪ ದಂಪತಿಗಳು ಹಾಗೂ ಜ್ಯೋತಿ ಸಹಕರಿಸಿದರು.