ನಿಡ್ಪಳ್ಳಿ: ಸುದ್ದಿ ಅರಿವು ಕೃಷಿ ಕೇಂದ್ರದ ವತಿಯಿಂದ ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಸಭೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಡಿ.5 ರಂದು ನಡೆಯಿತು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರು ಈ ಕಾರ್ಯಕ್ರಮದ ಅವಶ್ಯಕತೆ ಮತ್ತು ಉದ್ದೇಶಗಳ ಬಗ್ಗೆ ಮಾತನಾಡಿದರು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕೆ, ಮಹಮ್ಮದ್ ಬಡಗನ್ನೂರು, ಆರ್.ಸಿ.ನಾರಾಯಣ ರೆಂಜ, ಬೆಟ್ಟಂಪಾಡಿ ಪ್ರಾ.ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ ರೈ ಗುತ್ತು, ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜು ಉಪ ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ದಿ ಬಿಡುಗಡೆಯ ವರದಿಗಾರ ಉಮೇಶ್ ಮಿತ್ತಡ್ಕ ಸ್ವಾಗತಿಸಿ, ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಸುದ್ದಿ ಬಿಡುಗಡೆಯ ವರದಿಗಾರ ಶರತ್ ಕುಮಾರ್ ಪಾರ ನಿರೂಪಿಸಿದರು.