puttur: ವಿವೇಕಾನಂದ ವಿದ್ಯಾಸಂಸ್ಥೆಗಳ ನಿರ್ಮಾತೃವಾಗಿ ಸಾಮಾಜಿಕ, ರಾಜಕೀಯ, ಧಾರ್ಮಿಕ, ಶೈಕ್ಷಣಿಕ ಹೀಗೆ ಸಮಾಜದ ಸರ್ವ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಮೌಲ್ಯಯುತ ಶಿಕ್ಷಣದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಪಾಲಿಗೆ ಜ್ಞಾನದ ಬೆಳಕಾಗಿ, ಹಿರಿಯ ಮಾರ್ಗದರ್ಶಕರಾಗಿದ್ದವರು ಉರಿಮಜಲು ರಾಮ್ ಭಟ್. ಅವರು ತಮ್ಮ ರಾಜಕೀಯ ಶಿಸ್ತು, ಸೈದ್ಧಾಂತಿಕ ಬದ್ಧತೆ, ನೇರ ನಡೆ-ನುಡಿ ಹಾಗೂ ಶುದ್ಧ ಹಸ್ತ ರಾಜಕೀಯ ಜೀವನ ಹಾಗೂ ಹಿರಿತನದ ಕಾರಣದಿಂದಾಗಿ ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದರು. ಇವರ ತತ್ವ ಆದರ್ಶಗಳು ನಮಗೆಲ್ಲರಿಗೂ ದಾರಿದೀಪ ಎಂದು ನಿಕಟಪೂರ್ವ ಗೋರಕ್ಷಾ ಪ್ರಮುಖ್ ಆದ ಮುರಳಿಕೃಷ್ಣ ಹಸಂತಡ್ಕ ಹೇಳಿದರು.
ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಉರಿಮಜಲು ರಾಮ ಭಟ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.ಕಾಲೇಜಿನ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಈ ಕಾರ‍್ಯಕ್ರಮದಲ್ಲಿ ಭಾಗವಹಿಸಿದ್ದರು.