ಪಾಣಾಜೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಹಾಗೂ ಪಾಣಾಜೆ ಗ್ರಾಮ ಸಮಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಡಿ.8 ರಂದು ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ನಡೆಯಿತು.

ಪ್ರೌಢಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ದೀಪ ಬೆಳಗಿಸಿ ಉದ್ಘಾಟಿಸಿದರು.

ಪಾಣಾಜೆ ಆಯುರ್ವೇದ ತಜ್ಞರಾದ ಡಾ.ಪ್ರಸನ್ನಾ ಅಖಿಲೇಶ್ ಅರ್ದಮೂಲೆ,ಸ್ಪರ್ಶ ಕ್ಲಿನಿಕ್ ಪುತ್ತೂರು ಇದರ ಡಾ.ಅಜಿತ್ ನಾರಾಯಣ ಕೊಂದಲ್ಕಾನ, ಸಮಾಜ ಸೇವಕ ಪ್ರಸನ್ನ ಕುಮಾರ್ ಮಾರ್ತ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಾಲಯದ ಅಧ್ಯಕ್ಷ ಉಮೇಶ್ ಗೌಡ ಕೋಡಿಬೈಲು, ಪುತ್ತೂರು ಪುತ್ತಿಲ ಪರಿವಾರ ಸೇವಾ ಸಮಿತಿ ಅಧ್ಯಕ್ಷ ಮಹೇಂದ್ರ ವರ್ಮ ವಳಾಲು, ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪ್ರ.ಕಾರ್ಯದರ್ಶಿ ರವಿ ಕುಮಾರ್ ರೈ ಮಠ, ದ.ಕ.ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ಪಾಣಾಜೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಭಟ್ ಬೊಳುಕಲ್ಲು, ಆರ್ಲಪದವು ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಪುಷ್ಪರಾಜ್ ರೈ ಕೋಟೆ, ಪ್ರಗತಿಪರ ಕೃಷಿಕ ಕೃಷ್ಣ ಪ್ರಕಾಶ್ ಭಟ್ ಅರ್ಧಮೂಲೆ, ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸದಸ್ಯ ಸುನಿಲ್ ಬೊರ್ಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅಧ್ಯಕ್ಷತೆ ವಹಿಸಿದ್ದರು. ಸಿಂಚನ ಎಸ್ ಪ್ರಾರ್ಥಿಸಿ, ವಸಂತ್ ಭರಣ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೀಪ್ ಪಾಣಾಜೆ ವಂದಿಸಿ, ಧನ್ವಿ ರೈ ಕೋಟೆ ಕಾರ್ಯಕ್ರಮ ನಿರೂಪಿಸಿದರು. ಪುತ್ತಿಲ ಪರಿವಾರದ ಸದಸ್ಯರು ಸಹಕರಿಸಿದರು.

ದಂತ ಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ನೇತ್ರ ತಪಾಸಣೆ, ಬಿ.ಪಿ ಮತ್ತು ಶುಗರ್ ತಪಾಸಣೆ, ರಕ್ತ ವರ್ಗೀಕರಣ, ಕಿವಿ, ಮೂಗು, ಗಂಟಲು ತಪಾಸಣೆ, ಎಲುಬು, ಚರ್ಮ ಮತ್ತು ಮಕ್ಕಳ ವಿಭಾಗದಲ್ಲಿ ತಪಾಸಣೆ ನಡೆದ ಶಿಬಿರದಲ್ಲಿ ಸುಮಾರು 300 ಮಂದಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here