ಪುತ್ತೂರು: ಸಾಮಾಜಿಕ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಳನ್ನು ಗುರುತಿಸಿ ಸವಣೂರಿನ ಶಿಲ್ಪಿ, ಸಹಕಾರಿ ರತ್ನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರಿಗೆ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ’ ಬೃಹತ್ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬಯಿ ಬಂಟರ ಸಂಘದ ಸಹಯೋಗದಲ್ಲಿ ಮುಂಬಯಿಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಡಿ.7 ರಂದು ನಡೆದ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ’ ಬೃಹತ್ ಕಾರ್ಯಕ್ರಮದಲ್ಲಿ ಸಮಾಜಿಕ ಸೇವಾ ಕ್ಷೇತ್ರದಲ್ಲಿ ಕೆ.ಸೀತಾರಾಮ ರೈ ಸವಣೂರು, ಚಲನಚಿತ್ರ ಇಂಡಸ್ಟ್ರೀಸ್ ವಿಭಾಗದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಸಹಿತ ಸುಮಾರು 13 ಮಂದಿ ಸಾಧಕರನ್ನು ಗೌರವಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಒಕ್ಕೂಟದ ವಿಶೇಷ ಮಹಾ ನಿರ್ದೇಶಕ ತೋನ್ಸೆ ಆನಂದ ಎಂ.ಶೆಟ್ಟಿ, ಎಂಆರ್ಜಿ ಗ್ರೂಪ್ ಆಡಳಿತ ನಿರ್ದೇಶಕ ಡಾ| ಕೆ. ಪ್ರಕಾಶ್ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ ಸಹಿತ ಹಲವಾರು ಮಂದಿ ಗಣ್ಯರು ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.