ಉಪ್ಪಿನಂಗಡಿ: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕೌಕ್ರಾಡಿ ಗ್ರಾಮದ ಕಾವು ಕ್ರಾಸ್ ಎಂಬಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮಾವಳ್ಳಿ ಗ್ರಾಮದ ನಿವಾಸಿಗರಾದ ನಾಲ್ವರು ಯಾತ್ರಾರ್ಥಿಗಳು ಎರಡು ಬೈಕ್‌ಗಳಲ್ಲಿ ಧರ್ಮಸ್ಥಳ ಕ್ಷೇತ್ರ ದರ್ಶನ ಮಾಡಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಯಾತ್ರೆ ಕೈಗೊಂಡ ಸಂದರ್ಭದಲ್ಲಿ ಆದಿತ್ಯವಾರ ಈ ದುರ್ಘಟನೆ ಸಂಭವಿಸಿದ್ದು, ಕಾರು ಚಾಲಕ ನಿರ್ಲಕ್ಷತನದಿಂದ ಕಾರನ್ನು ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.
ಇದರ ಪರಿಣಾಮ ಅರುಣ್ ಆಚಾರಿ ಚಲಾಯಿಸುತ್ತಿದ್ದ ಬೈಕ್ ನಲ್ಲಿ ಹಿಂಬದಿ ಸವಾರನಾಗಿದ್ದ ಲಕ್ಷ್ಮಣ ಆಚಾರಿ ರವರ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯಿಂದ ಎರಡೂ ವಾಹನಗಳು ಜಖಂಗೊಂಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.