ಎಸ್​ಎಂ ಕೃಷ್ಣ ನಿಧನ-ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here