ಉಪ್ಪಿನಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾಗಿ ಇಳಂತಿಲ ಗ್ರಾ.ಪಂ. ಸದಸ್ಯ ಇಸುಬು ಯು.ಕೆ. ಅವರನ್ನು ನೇಮಕಗೊಳಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದ.ಕ. ಜಿಲ್ಲಾ ಅಧ್ಯಕ್ಷರಾದ ಜೋಕಿಂ ಡಿಸೋಜಾ ಅವರ ಅನುಮೋದನೆಯ ಮೇರೆಗೆ ಈ ನೇಮಕಾತಿ ನಡೆದಿದೆ.
ಇಳಂತಿಲ ಗ್ರಾ.ಪಂ.ನಲ್ಲಿ ಐದು ಬಾರಿ ಸದಸ್ಯನಾಗಿ ಚುನಾಯಿತರಾಗಿರುವ ಇಸುಬು ಯು.ಕೆ. ಅವರು ಎರಡು ಬಾರಿ ಗ್ರಾ.ಪಂ. ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ, ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಉಪ್ಪಿನಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ನಗರ ಬ್ಲಾಕ್ ಅಧ್ಯಕ್ಷರಾಗಿ ಇಸುಬು ನೇಮಕ