ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರ ಪ್ರತಿ ಗ್ರಾಮದಲ್ಲೂ ಬಿಡುಗಡೆ – ಕಡಬ ತಾಲೂಕು ಸಮಿತಿ ರಚನೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡನೇ ವರ್ಷದ ಭಕ್ತಿಪ್ರಧಾನವಾಗಿ ಡಿ.28 ಮತ್ತು 29ರಂದು ನಡೆಯುವ ವೈಭವದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪ್ರತಿ ಗ್ರಾಮದಲ್ಲೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದ್ದು, ಕಡಬ ತಾಲೂಕಿಗೆ ಸಂಬಂಧಿಸಿ ತಾಲೂಕು ಸಮಿತಿ ರಚನೆ ಮಾಡಲಾಗಿದೆ.
ಡಿ.6ರಂದು ಕಡಬ ತಾಲೂಕಿನಲ್ಲಿ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮದಲ್ಲಿ ಕಡಬ ತಾಲೂಕು ಘಟಕದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ರಚನೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ವೆಂಕಟ್ರಮಣ ಕಡಬ, ಅಧ್ಯಕ್ಷರಾಗಿ ಜನಾರ್ದನ ರಾವ್ ಕಡಬ, ಪ್ರಧಾನಕಾರ್ಯದರ್ಶಿಯಾಗಿ ರವೀಂದ್ರ ದಾಸ್ ಪೂಂಜಾ ಕೂನ್ತೂರು ಹಾಗೂ ಕಾರ್ಯದರ್ಶಿಯಾಗಿ ಗಿರೀಶ್ ಕಡಬ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಾಧ್ಯಕ್ಷ ಉಮೇಶ್ ಕೊಡಿಬೈಲು, ಹಾಗೂ ಪ್ರದಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here