ಪುತ್ತೂರು: ಬುಡೋಕಾನ್ ಕರಾಟೆ ಇಂಟರ್ ನ್ಯಾಷನಲ್ ಇದರ ವತಿಯಿಂದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅವಿ ವಿ. ರೈ ಟೀಮ್ ಕಟಾ ವಿಭಾಗದಲ್ಲಿ ಚಿನ್ನದ ಪದಕ, 45 ರಿಂದ 50 ಕೆಜಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಅನಿ ವಿ. ರೈ 25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಪುತ್ತೂರು ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಅಲೈಡ್ ಆರ್ಟ್ಸ್‌ನ ವಿದ್ಯಾರ್ಥಿಗಳಾಗಿರುವ ಇವರು ಕರಾಟೆ ಶಿಕ್ಷಕ ಸುರೇಶ್ ಎಂ. ರವರಿಂದ ತರಬೇತಿ ಪಡೆಯುತ್ತಿದ್ದಾರೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ಮತ್ತು ಎರಡನೇ ತರಗತಿಯ ವಿದ್ಯಾರ್ಥಿಗಳಾಗಿರುವ ಇವರು ಪುತ್ತೂರು ಎಪಿಎಂಸಿ ರಸ್ತೆಯಲ್ಲಿರುವ ವಿನೋದ್ ರೈ ಮತ್ತು ಅಕ್ಷತಾ ವಿ. ರೈ ದಂಪತಿಯ ಪುತ್ರರಾಗಿದ್ದಾರೆ.