ಸವಣೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.), ಪುತ್ತೂರು ಇದರ ಸಾರಥ್ಯದಲ್ಲಿ 2ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮ ಸಂಗಮ ಕಾರ್ಯಕ್ರಮದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸವಣೂರು ಯುವ ಸಭಾಭವನದಲ್ಲಿ ದ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಧರ್ಮ ಸಂಗಮ ಕಾರ್ಯಕ್ರಮ ಹಾಗೂ ಶ್ರೀನಿವಾಸ ದೇವರ ಕಾರ್ಯಕ್ರಮದಲ್ಲಿ ಹಿಂದುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು, ಇದಕ್ಕಾಗಿ ಪ್ರತೀ ಮನೆ ಮನೆಗೂ ಕಾರ್ಯಕ್ರಮಕ್ಕೆ ಆಮಂತ್ರಿಸುವ ಕಾರ್ಯ ನಮ್ಮಿಂದ ಆಗಬೇಕೆಂದು, ಹಾಗೂ ಪ್ರತಿಯೊಬ್ಬರ ಸಹಕಾರ ಬಯಸಿದರು. ಕಾರ್ಯಧ್ಯಕ್ಷ ಉಮೇಶ್ ಕೋಡಿಬೈಲು ಕಾರ್ಯಕ್ರಮದ ಮಾಹಿತಿ ನೀಡಿದರು.


ವೆಂಕಟ್ರಮಣ ಕಡಬ, ವೆಂಕಟೇಶ್ ಭಟ್ ಕೊಯಿಕುಡೆ, ಶ್ರೀನಿವಾಸ ಕಲ್ಯಾಣೋತ್ಸವ ಸವಣೂರು ವಲಯ ಸಮಿತಿಯ ಗೌರವಾಧ್ಯಕ್ಷ ಗಿರಿಶಂಕರ್ ಸುಲಾಯ ದೇವಸ್ಯ, ಅಧ್ಯಕ್ಷ ಹರಿಪ್ರಸಾದ್ ಅಂಗಡಿಮೂಲೆ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿಯ ಮಾಜಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ನಿರ್ದೇಶಕ ಗಂಗಾಧರ ಪೆರಿಯಡ್ಕ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಪ್ರೀತ್ ರೈ ಖಂಡಿಗ, ಸವಣೂರು ಹಿಂದು ಜಾಗರಣ ವೇದಿಕೆಯ ಅಧ್ಯಕ್ಷ ಶ್ರೀಧರ ಇಡ್ಯಾಡಿ, ರಾಮಕೃಷ್ಣ ಪ್ರಭು, ಚೇತನ್ ಕುಮಾರ್ ಕೋಡಿಬೈಲ್, ಸತೀಶ್ ಬಲ್ಯಾಯ, ದಿವಾಕರ ಬಸ್ತಿ, ಸಚಿನ್ ಸವಣೂರು, ಕೀರ್ತನ್ ಕೋಡಿಬೈಲು ಹಾಗೂ ಹಿಂದು ಕಾರ್ಯಕರ್ತರು ಉಪಸ್ಥಿತರಿದ್ದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಇಡ್ಯಾಡಿ, ಕಾರ್ಯದರ್ಶಿ ಕೌಶಿಕ್ ಮಾಂತೂರು, ಉಪಾಧ್ಯಕ್ಷ ಕೀರ್ತನ್ ಕೋಡಿಬೈಲು, ಕೋಶಾಧಿಕಾರಿ ದೇವಿ ಪ್ರಸಾದ್ ಪಂಚೋಡಿ, ಪುಷ್ಪರಾಜ್ ಆರೆಳ್ತಾಡಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here