ಪುತ್ತೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಅಂಚೆ ಇಲಾಖೆಯ ಸಹಕಾರದೊಂದಿಗೆ ಒಳಮೊಗ್ರು ಗ್ರಾಮ ಪಂಚಾಯತ್‌ನ ಹಳೆ ಕಟ್ಟಡದಲ್ಲಿ ದ.13 ರಂದು ನಡೆಯಬೇಕಾಗಿದ್ದ ಬಾಲ ಆಧಾರ್ ಕ್ಯಾಂಪ್ ಅನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ತಿಳಿಸಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.