ಕೌಕ್ರಾಡಿ: ಸ್ವ-ಉದ್ಯೋಗ ಮಾಹಿತಿ, ಲಾಭಾಂಶ ವಿತರಣೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಸ್ವ ಉದ್ಯೋಗ ಮಾಹಿತಿ ಹಾಗೂ ಲಾಭಾಂಶ ವಿತರಣಾ ಕಾರ್ಯಕ್ರಮ ದೋಂತಿಲ ಸುಜಾತಾರವರ ಮನೆಯಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇಂದ್ರ ಒಕ್ಕೂಟ ಸಮಿತಿಯ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕರೂ ಆದ ಬಾಲಕೃಷ್ಣ ಹಾರ್ಪಳ ಅವರು ಸ್ವ ಉದ್ಯೋಗದ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಆನಂದ ಡಿ.ಬಿ.ಅವರು ತಂಡದ ಸದಸ್ಯರಿಗೆ ಲಾಭಾಂಶ ವಿತರಿಸಿ ಶುಭ ಹಾರೈಸಿದರು.
ಕಡಬ ತಾಲೂಕು ಕೃಷಿ ಮೇಲ್ವಿಚಾರಕ ಸೋಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾಪ್ರತಿನಿಧಿ ನಮಿತಾ ಎಸ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಸುಮನಾ ಎಸ್ ವಂದಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿ ಹೇಮಾ ವಿ, ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here