ಪುತ್ತೂರು: ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘ ಇದರ ಚುನಾವಣಾ ದಿನಾಂಕದಿಂದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಸಂಘದ ಕಛೇರಿಯಲ್ಲಿ ದ.25 ರಂದು ಪೂರ್ವಾಹ್ನ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಸಂಘದ ಸಾಮಾನ್ಯ ಸ್ಥಾನಗಳು 7, ಪ.ಜಾತಿ ಮೀಸಲು ಸ್ಥಾನ 1, ಪ.ಪಂಗಡ ಮೀಸಲು ಸ್ಥಾನ 1, ಹಿಂದುಳಿದ ವರ್ಗ ‘ಎ’ ಮೀಸಲು ಸ್ಥಾನ 1 , ಹಿಂದುಳಿದ ವರ್ಗ ‘ಎ’ ಮೀಸಲು ಸ್ಥಾನ 1 ಹಾಗೂ ಮಹಿಳಾ ಮೀಸಲು 2 ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ದ.13 ರಂದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸಲು ಆರಂಭಗೊಂಡು ದ.17 ಕಡೆಯ ದಿನಾಂಕವಾಗಿರುತ್ತದೆ. ದ.18 ರಂದು ನಾಮಪತ್ರಗಳ ಪರಿಶೀಲನೆ ನಡೆದು ದ.19 ನಾಮಪತ್ರ ಹಿಂಪಡೆಯಲು ಅಂತಿಮ ದಿನಾಂಕವಾಗಿರುತ್ತದೆ. ಚುನಾವಣೆ ಮತ್ತು ಮತ ಎಣಿಕೆ ದ.25 ರಂದು ನಡೆಯಲಿದೆ ಎಂದು ಚುನಾವಣಾ ರಿಟರ್ನಿಂಗ್ ಅಧಿಕಾರಿ ಕವಿತಾ ಕೆರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.